ನಾಯಕನಹಟ್ಟಿ: ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಚಿತ್ರದುರ್ಗ ಜಿಲ್ಲೆಯ ತಳಕು ಪೊಲೀಸ್ ಠಾಣೆಯಲ್ಲಿ ರೌಡಿ ಪೆರೇಡ್ ನಡೆಸಲಾಯಿತು. ವೃತ್ತ ನಿರೀಕ್ಷಕ ಹನುಮಂತಪ್ಪ ಎಂ. ಶಿರೇಹಳ್ಳಿ ರೌಡಿಗಳಿಗೆ ಕಾನೂನು ಪಾಲಿಸುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.










ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳನ್ನು ಬುಧವಾರ ಠಾಣೆಗೆ ಕರೆಯಿಸಿ ರೌಡಿ ಪೆರೇಡ್ ನಡೆಸಲಾಯಿತು. ಈ ವೇಳೆ ಮಾತನಾಡಿದ ತಳಕು ಮತ್ತು ನಾಯಕನಹಟ್ಟಿ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ. ಶಿರೇಹಳ್ಳಿ, ಯಾವುದೇ ಅಕ್ರಮ ಚಟುವಟಿಕೆ, ಗಲಾಟೆ, ಬೆದರಿಕೆ, ವಸೂಲಿ ಹಾಗೂ ಸಾರ್ವಜನಿಕ ಶಾಂತಿ ಭಂಗ ಮಾಡುವ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಖಡಕ್ ಸೂಚನೆ ನೀಡಿದರು.
ಕಾನೂನು ಉಲ್ಲಂಘಿಸಿದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸಹಕರಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಳಕು ಪೊಲೀಸ್ ಠಾಣೆಯ ಪಿಎಸ್‌ಐ ಕೆ. ಶಿವಕುಮಾರ್, ನಾಯಕನಹಟ್ಟಿ ಪಿಎಸ್‌ಐ ಜಿ. ಪಾಂಡುರಂಗಪ್ಪ, ಪರಶುರಾಂಪುರ ಪಿಎಸ್‌ಐ ಎಚ್. ಮಾರುತಿ, ವಾಕಿ–2 ಪಿಎಸ್‌ಐ ಜಿ. ಮಂಜುನಾಥ್, ಎಎಸ್‌ಐ ತಿರುಕಪ್ಪ, ಜಗಳೂರಪ್ಪ ಹಾಗೂ ಸಿಬ್ಬಂದಿಗಳಾದ ನಿತಿನ್, ಏಕಾಂತ ರೆಡ್ಡಿ, ಜಾಕಿರ್ ಹುಸೇನ್, ಪುರುಷೋತ್ತಮ್, ರಾಜು ಮತ್ತು ರವಿ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.