March 17, 2026
IMG-20250922-WA0130.jpg

ಚಳ್ಳಕೆರೆ: ನಗರದ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದುಳಿದ ವರ್ಗಗಳ ಹಾಗೂ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ನೂತನ ಕಟ್ಟಡ ನಿರ್ಮಾಣದಲ್ಲಿ ಯಾವುದೇ ಲೋಪದೋಷವಾಗದಂತೆ ನಿರ್ಮಾಣ ಕಾರ್ಯ ಕೈಗೊಳ್ಳಬೇಕು ಎಂದು ಶಾಸಕ ಟಿ ರಘುಮೂರ್ತಿ ತಾಕೀತು ಮಾಡಿದರು.

ನಗರದ ಹೆಚ್.ಪಿ.ಪಿ.ಸಿ.ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಕಟ್ಟಡ ಕಾಮಗಾರಿ ಮತ್ತು ಕಾಲೇಜಿನ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿ ಕಾಲೇಜಿನಲ್ಲಿ ಪದವಿ ಹಂತದ ತರಗತಿಗಳು ನಡೆಯುತ್ತಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕಾಲೇಜಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಲ್ಲದೆ ನೂತನ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಗುತ್ತಿಗೆದಾರರು ಹಾಗೂ ಕಾಲೇಜಿನ ಆಡಳಿತ ವರ್ಗ ಮುತುವರ್ಜಿ ವಹಿಸಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಗಮನಹರಿಸಬೇಕು ಕಾಲೇಜಿಗೆ ಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನಾನು ಬದ್ಧನಾಗಿದ್ದೆನೆ ಎಂದರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರ ಇಂಜಿನಿಯರ್ ಸಿದ್ದೇಶ್ ಗೌಡ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ.ದೇವೇಂದ್ರಪ್ಪ, ನಗರಸಭೆ ಸದಸ್ಯರಾದ ರಮೇಶ್ ಗೌಡ, ಮುಖಂಡರಾದ ಸೈಯದ್, ಪ್ರೊ. ಶಿವಲಿಂಗಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading