ತಳಕು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ತಳಕು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳಿಗೆ ಸಿಹಿ ಹಂಚಿ, ನೋಟ್‌ಬುಕ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಾಯಕನಹಟ್ಟಿ ಮಂಡಲ ಅಧ್ಯಕ್ಷರಾದ ಚೆನ್ನಾಗಾನಹಳ್ಳಿ ಮಲ್ಲೇಶ್ ಮಾತನಾಡಿ, ಸೇವಾ ಸಂಕಲ್ಪ ಅಭಿಯಾನದ ಮೂಲಕ ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ಮನ್ನೆಕೋಟೆ ನಾಗರಾಜ್, ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ನಿಕಟಪೂರ್ವ ಸದಸ್ಯರಾದ ಪಾಪೇಶ್ ನಾಯಕ, ಪ್ರಧಾನ ಕಾರ್ಯದರ್ಶಿಗಳಾದ ಬೆಂಕಿ ಗೋವಿಂದಪ್ಪ ಹಾಗೂ ಮೂರ್ತಿ, ಕಾರ್ಯದರ್ಶಿ ಎಚ್.ವಿ. ಪ್ರಕಾಶ್ ರೆಡ್ಡಿ, ಮುಖಂಡರಾದ ಮನ್ನೆಕೋಟೆ ರವಿಕುಮಾರ್, ತಳಕು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ತಳಕು ಮುಖಂಡ ಓಬಣ್ಣ, ಎಸ್‌ಟಿ ಮೋರ್ಚಾ ಅಧ್ಯಕ್ಷ ಹಿರೇಹಳ್ಳಿ ನಾಗರಾಜ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ. ಮಲ್ಲಿಕಾರ್ಜುನ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೋರಯ್ಯ, ಹಿರೇಹಳ್ಳಿ ಶಕ್ತಿ ಕೇಂದ್ರ ಪ್ರಮುಖ ಬೋರೇಶ, ಹೊಸಳ್ಳಿ ಮಲ್ಲಿಕಾರ್ಜುನ್, ಎಸ್‌ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಮತ್ತೂರು ಮುಖಂಡ ಸುರೇಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.





About The Author
Discover more from JANADHWANI NEWS
Subscribe to get the latest posts sent to your email.