December 15, 2025
1763820953524.jpg

ಚಿತ್ರದುರ್ಗ ನ.22
ಹಿರಿಯೂರಿನ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ“ಹದಿಯರೆಯದ ವೈಜ್ಞಾನಿಕ ವಿಶ್ಲೇಷಣೆ ಹಾಗೂ ವೈಯಕ್ತಿಕ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಆದಿವಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸ್ಮಿತಾ ಯಾದವ್, ಹದಿಹರೆಯದ ಸಮಯದಲ್ಲಿ ವಿದ್ಯಾರ್ಥಿನಿಯರು ಅನುಭವಿಸುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಕುರಿತು ಸವಿವರವಾಗಿ ಮಾಹಿತಿ ನೀಡಿದರು. ಜೊತೆಗೆ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಅಗತ್ಯತೆ, ಸರಿಯಾದ ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ವಿದ್ಯಾರ್ಥಿನಿಯರಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಪ್ರಶ್ನೆಗಳಿಗೆ ಉತ್ತರ ಪಡೆಯುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಗಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್, ಉಪನ್ಯಾಸಕರು, ಕಾಲೇಜು ಆಡಳಿತ ಸಿಬ್ಬಂದಿ, ಆರೋಗ್ಯ ನಿರೀಕ್ಷಣಾಧಿಕಾರಿ ರಮೇಶ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading