March 17, 2026
IMG-20250223-WA0190.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ಶಾಲಾ ವಾರ್ಷಿಕೋತ್ಸವದ ಕಾರ್ಯಕ್ರಮ ವಿದ್ಯಾರ್ಥಿಗಳ ಪ್ರತಿಭೆಗಳು ಅನಾವರಣಗೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಬಿ ಐ ಇ ಆರ್ ಟಿ ಶಂಕರೇಗೌಡ ಹೇಳಿದರು.

ಅವರು ತಾಲೂಕಿನ ಲಕ್ಕಿಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳು ಸೇರಿದಂತೆ ಇತರೆ ಕಾರ್ಯಗಳನ್ನು ಮಾಡುವ ಮೂಲಕ ಆ ಭಾಗದಲ್ಲಿರುವ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಪೋಷಕರುಗಳು ಶಾಲೆಗಳಿಗೆ ಆಗಾಗ್ಗೆ ಭೇಟಿ ನೀಡಿ ಶಾಲೆಯಲ್ಲಿ ಕಲಿಯುತ್ತಿರುವ ತಮ್ಮ ಮಕ್ಕಳ ಕಲಿಕೆ ಮತ್ತು ನಡವಳಿಕೆ, ಶಾಲೆ ಮತ್ತು ಶಿಕ್ಷಕರುಗಳ ಬಗ್ಗೆ ಮಾಹಿತಿ ಪಡೆದು. ಏನಾದರೂ ನ್ಯೂನ್ಯತೆಗಳು ಕಂಡು ಬಂದಲ್ಲಿ ಅವುಗಳನ್ನು ಶಾಲೆಯ ಮಟ್ಟದಲ್ಲಿಯೇ ಪರಿಹರಿಸುವ ಕೆಲಸವನ್ನು ಮಾಡಬೇಕು. ಶಾಲೆಗಳಿಗೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬಂದಲ್ಲಿ ಶಿಕ್ಷಕರುಗಳು, ಶಾಲಾ ಅಭಿವೃದ್ಧಿ ಸಮಿತಿ, ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದರ ಜೊತೆಗೆ ಗ್ರಾಮಸ್ಥರುಗಳು ಜೊತೆಗೂಡಿ ಅಗತ್ಯ ಸೌಲಭ್ಯಗಳನ್ನು ಶಾಲೆಗಳಿಗೆ ಕೊಡಿಸುವಂತಹ ಕೆಲಸ ಮಾಡುವ ಮೂಲಕ ಶಾಲೆಗಳ ಅಭಿವೃದ್ಧಿ ಹಾಗೂ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಕಾರಣಕರ್ತರಾಗಬೇಕು. ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳವಾಗಲು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.

ವೇದಿಕೆ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹದೇವ್, ಸದಸ್ಯರಾದ ಗೋಪಾಲ್, ರುಕ್ಮಿಣಿರಾಮಕೃಷ್ಣ, ಲತಾಲೋಕೇಶ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಮಂಜೇಗೌಡ, ಹಾಲಿನ ಡೇರಿ ಅಧ್ಯಕ್ಷ ಸಂಜಯ್ ಕುಮಾರ್, ಉಪಾಧ್ಯಕ್ಷ ದೇವೇಗೌಡ, ಕಾರ್ಯದರ್ಶಿ ಮಂಜುನಾಥ್,
ಸಿ.ಆರ್.ಪಿ ಮಂಜು, ಮುಖ್ಯ ಶಿಕ್ಷಕ ಮುರಳಿಧರ, ಶಿಕ್ಷಕರಾದ ಜಯಣ್ಣ, ನಿರಂಜನ್, ಕಲ್ಪನಾ, ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಪಲ್ಲವಿ, ಮುಖಂಡರುಗಳಾದ ರಾಮಕೃಷ್ಣ, ಮೊಗಣ್ಣೆಗೌಡ, ರಮೇಶ್, ಪ್ರದೀಪ್ ಕುಮಾರ್, ಅಶೋಕ್, ಭೈರ, ಲೋಕೇಶ್, ವಿದ್ಯಾರ್ಥಿಗಳು, ಪೋಷಕರುಗಳು, ಶಿಕ್ಷಕ ವೃಂದದವರು, ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರುಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading