February 23, 2026
FB_IMG_1771855601529.jpg

ಬೆಂಗಳೂರು: Krishna Home Officeದಲ್ಲಿ ಇಂದು 2026–27ನೇ ಸಾಲಿನ ರಾಜ್ಯ ಬಜೆಟ್ ಪೂರ್ವ ಸಭೆ ನಡೆಯಿತು. ಆಡಳಿತ ಪಕ್ಷದ ಪರಿಶಿಷ್ಟ ಪಂಗಡದ ಶಾಸಕರುಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ, ಅವರ ವಿವಿಧ ಬೇಡಿಕೆಗಳು ಮತ್ತು ಅಭಿವೃದ್ಧಿ ಸಂಬಂಧಿತ ಸಲಹೆಗಳನ್ನು ಆಲಿಸಲಾಯಿತು.

ಸಭೆಯಲ್ಲಿ ಮಾತನಾಡಿದವರು, ಪರಿಶಿಷ್ಟ ಪಂಗಡದ ಸಮುದಾಯದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ಬಜೆಟ್‌ನಲ್ಲಿ ಸಾಧ್ಯವಾದ ಮಟ್ಟಿಗೆ ಪೂರಕ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಶಿಕ್ಷಣ, ಉದ್ಯೋಗ ಸೃಷ್ಟಿ, ವಸತಿ, ಮೂಲಸೌಕರ್ಯ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಅಭಿಪ್ರಾಯವನ್ನು ಶಾಸಕರುಗಳು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಆರ್ಥಿಕ ಸಲಹೆಗಾರರಾದ Basavaraj Rayareddy, ರಾಜಕೀಯ ಕಾರ್ಯದರ್ಶಿ Naseer Ahmed, ಅಪರ ಮುಖ್ಯ ಕಾರ್ಯದರ್ಶಿ Anjum Parvez, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ Ritesh Kumar Singh ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಮುದಾಯದ ಹಿತದೃಷ್ಟಿಯಿಂದ ಬಜೆಟ್‌ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading