February 23, 2026
IMG-20260223-WA0189.jpg

ಚಿತ್ರದುರ್ಗ: ನಗರದ ಎಸ್ ಆರ್ ಎಸ್ ಕಾಲೇಜುಯ ಪದವಿ ಹಾಗೂ ಬಿಎಡ್ ಪ್ರಶಿಕ್ಷಣಾರ್ಥಿಗಳಿಗಾಗಿ ಮಹಾತ್ಮ ಪುಲೆ ಅಧ್ಯಯನ ಕೇಂದ್ರ ವತಿಯಿಂದ 23.02.2026ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಂದನ್ ಕುಮಾರ್ ಅವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬಿಕಾಂ, ಬಿಸಿಎ ಮತ್ತು ಬಿಎಡ್ ವ್ಯಾಸಂಗದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಅತ್ಯಾವಶ್ಯಕವಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಶ್ರೀ ರಾಮಣ್ಣ ಆರ್ ಅವರು ರಾಜ್ಯ ಹಾಗೂ ಕೇಂದ್ರ ಮಟ್ಟದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗಳ ಜೊತೆಗೆ ಆರ್‌ಆರ್‌ಬಿ, ಎಸ್‌ಎಸ್‌ಸಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು. ಅರೆಕಾಲಿಕ, ಪೂರ್ಣಕಾಲಿಕ ಉದ್ಯೋಗದಲ್ಲಿರುವವರು ಹಾಗೂ ವ್ಯಾಸಂಗ ಮಾಡುತ್ತಿರುವ ಪದವೀಧರರಿಗೆ ಅನುಕೂಲವಾಗುವಂತೆ ತರಬೇತಿ ವೇಳಾಪಟ್ಟಿಯನ್ನು ರೂಪಿಸಲಾಗಿದೆ ಎಂದೂ ಅವರು ಹೇಳಿದರು. ಈ ಸುವರ್ಣಾವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಮಾಂತೇಶ್ ಅವರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರಕ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮತ್ತೊಬ್ಬ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಜಕರಾಯ ಪೂಜಾರಿ (ವಿಜಯಪುರ) ಅವರು ಜೀವನದಲ್ಲಿ ಯಶಸ್ಸು ಸಾಧಿಸಲು ಶ್ರದ್ಧೆ, ನಿಷ್ಠೆ ಹಾಗೂ ನಿರಂತರ ಪರಿಶ್ರಮ ಅಗತ್ಯವೆಂದು ತಿಳಿಸಿ, ತಂದೆ-ತಾಯಿಯರನ್ನೇ ಆದರ್ಶವಾಗಿ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಕಾರ್ಯಕ್ರಮವನ್ನು ಪ್ರಾಧ್ಯಾಪಕರಾದ ಶ್ರೀ ದೇವೇಂದ್ರಪ್ಪ ಅವರು ನಿರೂಪಿಸಿದರು. ಕಾಲೇಜಿನ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನೊಂದಣಿಗಾಗಿ ಸಂಪರ್ಕಿಸಿ: 9242843504, 9740108588, 9972446430

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading