April 23, 2026
FB_IMG_1776948037087.jpg

ಚಿತ್ರದುರ್ಗ, ಏ.23: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಎಸ್ ಅವರು ಗುರುವಾರ ಹಿರಿಯೂರು ತಾಲ್ಲೂಕಿನ ವಿ.ವಿ.ಪುರ ಹಾಗೂ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ, ಮಾಡದಕೆರೆ ಮತ್ತು ಅತ್ತಿಮಗ್ಗೆ ಗ್ರಾಮ ಪಂಚಾಯಿತಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದ ಅವರು, ಕಚೇರಿ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ವಸೂಲಾತಿ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ಈ ವೇಳೆ ಸಾರ್ವಜನಿಕರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ಪಡೆದು, ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವಂತೆ ಎಇಇ, ಜೆಇ ಹಾಗೂ ಪಿಡಿಒಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ, ತಾಲ್ಲೂಕು ಮಟ್ಟದ ಎಇಇ, ಗ್ರಾಮ ಪಂಚಾಯಿತಿ ಪಿಡಿಒ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading