ಚಳ್ಳಕೆರೆ ತಾಲೂಕಿನ ಸಾಣಿಕೆರೆಯ ವೇದಾ ಶಾಲೆಯ ವಿದ್ಯಾರ್ಥಿಗಳು 2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ಅತ್ತಯತ್ತಮ ಫಲಿತಾಂಶ ಸಾಧಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಮೂಲಕ ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುವ ಪ್ರತಿಷ್ಠಿತ ಶಾಲೆಯಾಗಿ ಮತ್ತೊಮ್ಮೆ ತಿರುಗಿ ನೋಡುವಂತೆ ಮಾಡಿದೆ.
ಈ ವರ್ಷದ SSLC ಪರೀಕ್ಷೆಗೆ ಒಟ್ಟು 90 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 39 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 45 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಲ್ಲಿ ಬೃಂದಾ ಜೆ. 618 ಅಂಕಗಳು (98.88%) ಗಳಿಸುವ ಮೂಲಕ ಶಾಲೆಗೆ ಅಗ್ರಸ್ಥಾನ ತಂದುಕೊಟ್ಟಿದ್ದಾರೆ. ಯಶಸ್ ಗೌಡ 609 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದು, ಜಗದೀಶ್ ರೆಡ್ಡಿ, ಶ್ರೀರಂಗ, ಭೂತೇಶ್ ಬಾಲಾಜಿ ಹಾಗೂ ಧನುಶ್ ವಿ. ತಲಾ 605 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ತೋರಿದ್ದಾರೆ.
ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರ ಶ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಿ.ಟಿ. ರವೀಂದ್ರ ಅವರು ಹೃದಯಪೂರ್ವಕವಾಗಿ ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸಿದರು.
About The Author
Discover more from JANADHWANI NEWS
Subscribe to get the latest posts sent to your email.