
ಚಳ್ಳಕೆರೆ ಮೇ23
ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆತೆರಳಿ ಸರ್ವೆಕೈಗೊಂಡು ಸರ್ಕಾರದಿಂದ ಅನುಷ್ಟಾನಿತ ಪಂಚ
ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ
ಯೋಜನಾ ಅನುಷ್ಠಾನ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ ಹೇಳಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರುಗಿದ
ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ
ವಹಿಸಿ ಮಾತನಾಡಿದರು.
ಪಂಚಗ್ಯಾರೆಂಟಿ ಸೌಲಭ್ಯ ವಂಚಿತ ಅರ್ಹ ಪಲಾನುಭವಿಗಳನ್ನು ಗುರುತಿಸಿ ಯೋಜನೆಯ ಸೌಲಭ್ಯ ಒದಗಿಸುವಂತೆ ತಿಳಿಸಿದರು.
ತಾಪಂ ಇಒ ಮಾತನಾಡಿ ಎಪಿಎಲ್ ಪಡಿತರ ಚೀಟಿ ಹೊಂದಿದ ತೆರಿಗೆ ಪಾವತಿಸದ ಸರಕಾರಿ ನೌಕರರು ಸಹಾ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಕು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.







ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಮಾತನಾಡಿ ಗ್ರಾಮಗಳ ವಾರು ಪಡಿತರ ಚೀಟಿ ಫಲಾನುಭವಿಗಳ ಪಟ್ಟಿ ಹಾಗೂ ಸೌಲಭ್ಯ ವಂಚಿತರ ಪಟ್ಟಿಯನ್ನು ಗ್ಯಾರೆಂಟಿ ಸಮಿತಿ ಸದಸ್ಯರಿ ನೀಡ ಬೇಕು ಗ್ಯಾರಂಟಿ ಯೋಜನೆಗಳು
ಇನ್ನು ತಲುಪದಿದಲ್ಲಿ, ತಲುಪದೇ ಇರಲು ಕಾರಣವನ್ನು
ಕಂಡು ಹಿಡಿದು ಪರಿಶೀಲಿಸಿ ಅದಕ್ಕೆ ಪರಿಹಾರವನ್ನು ಕಲ್ಪಿಸಿ
ಅರ್ಹರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಗ್ಯಾರೆಂಟಿ ಸಮಿತಿ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಇಲಾಖೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿಗಳು ಸಭೆಗೆ ಮಾಹಿತಿ ನೀಡಿದರು.



About The Author
Discover more from JANADHWANI NEWS
Subscribe to get the latest posts sent to your email.