May 23, 2026
IMG-20260523-WA0271.jpg

ಚಳ್ಳಕೆರೆ, ಮೇ 23:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಭದ್ರಾ ಮೇಲ್ದಂಡೆ ಯೋಜನೆಯ ಮೂಲವಾದ ತುಂಗಾ ಜಲಾಶಯ ಸೇರಿದಂತೆ ವಿವಿಧ ಕಾಮಗಾರಿ ಪ್ರದೇಶಗಳನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ನಿಗದಿತ ಅವಧಿಯೊಳಗೆ ಭದ್ರಾ ನೀರು ಚಿತ್ರದುರ್ಗ ಸೇರಿದಂತೆ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ತಲುಪುವಂತೆ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಯೋಜನೆಯ ಪ್ರಗತಿ, ಕಾಮಗಾರಿಗಳ ಸ್ಥಿತಿ, ನೀರು ಹರಿವು ವ್ಯವಸ್ಥೆ ಸೇರಿದಂತೆ ವಿವಿಧ ತಾಂತ್ರಿಕ ಅಂಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಸಾರ್ವಜನಿಕರಿಗೆ ಶೀಘ್ರದಲ್ಲೇ ಯೋಜನೆಯ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಹೊಸದುರ್ಗ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾದ ಬಿ.ಜಿ. ಗೋವಿಂದಪ್ಪ, ಚಿತ್ರದುರ್ಗ ಕ್ಷೇತ್ರದ ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ, ಹೊಳಲ್ಕೆರೆ ಶಾಸಕರಾದ ಡಾ. ಎಂ. ಚಂದ್ರಪ್ಪ, ಚಿತ್ರದುರ್ಗದ ಮಾಜಿ ಸಂಸದರಾದ ಬಿ.ಎನ್. ಚಂದ್ರಪ್ಪ, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಸೇರಿದಂತೆ ಭದ್ರಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading