May 23, 2026
cm-siddaramaiah.jpg

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿ ನಾಳೆ (ಭಾನುವಾರ, ಮೇ 24, 2026) ನಡೆಯಬೇಕಾಗಿದ್ದ ಮುಖ್ಯಮಂತ್ರಿ Siddaramaiah ಅವರ ಅಧಿಕೃತ ಪ್ರವಾಸ ಕಾರ್ಯಕ್ರಮ ಅನಿವಾರ್ಯ ಕಾರಣಗಳಿಂದ ರದ್ದುಗೊಂಡಿದೆ.
ಈ ಕುರಿತು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ. ಚಿರಂಜೀವಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 24ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗೊಳ್ಳಬೇಕಾಗಿದ್ದ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿರುತ್ತಾರೆ” ಎಂದು ತಿಳಿಸಿದ್ದಾರೆ.
ಈ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಅಧಿಕೃತವಾಗಿ ತಿಳಿಸಲಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading