July 12, 2025
power-cuts-1200x.jpg

ನಾಯಕನಹಟ್ಟಿ: ತಳಕು ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ನಾಯಕನಹಟ್ಟಿ ಮತ್ತು ನೇರಲಗುಂಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ಒಂದನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ನಾಯಕನಹಟ್ಟಿ ಹಾಗೂ ನೇರಲಗುಂಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ರೈತರು ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ .

ವಿದ್ಯುತ್ ಸರಬರಾಜು ಅಡಚಣೆ ಯಾಗುವ ಗ್ರಾಮಗಳು
ನಾಯಕನಹಟ್ಟಿ/ ನೇರಲಗುಂಟೆ.66/11ಕೆವಿ. ವಿದ್ಯುತ್ ವಿತರಣಾ ಕೇಂದ್ರದಿಂದ ವ್ಯಾಪ್ತಿಗೆ ಒಳಪಡುವ ಗ್ರಾಮ ಪ್ರದೇಶಗಳಾದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ. ನಲಗೇತನಹಟ್ಟಿ, ಗೌಡಗೆರೆ, ಮಲ್ಲೂರಹಳ್ಳಿ, ನೇರಲಗುಂಟೆ ಎನ್, ದೇವರಹಳ್ಳಿ, ಎನ್, ಮಹದೇವಪುರ, ತಿಮ್ಮಪ್ಪಯ್ಯನಹಳ್ಳಿ, ಅಬ್ಬೇನಹಳ್ಳಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳು ವಿದ್ಯುತ್‌ ಪೂರೈಕೆ ಸ್ಥಗಿತವಾಗಲಿದೆ.
.
ಸಾರ್ವಜನಿಕರು ಸಹಕರಿಸಬೇಕು ಎಂದು ಕೆಪಿಟಿಸಿಎಲ್ ಎಇಇ
ಪ್ರಸನ್ನಕುಮಾರ್‌, ಎಂಜಿನಿಯರ್ ಹರೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading