ಚಿತ್ರದುರ್ಗ ಅ.23:
ಮಂಗಳವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 3.7 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.3 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 0.1 ಹಿರಿಯೂರು ತಾಲ್ಲೂಕು 7 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 1 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 1.1 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.3 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 8.3 ಮಿ.ಮೀ, ನಾಯಕನಹಟ್ಟಿ 3.7 ಮಿ.ಮೀ, ಪರಶುರಾಂಪುರ 16.1 ಮಿ.ಮೀ, ತಳಕು 0.8 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ 0.2 ಮಿ.ಮೀ, ಹಿರೇಗುಂಟನೂರು 0.1 ಮಿ.ಮೀ, ತುರುವನೂರು 0.1 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 1.8 ಮಿ.ಮೀ, ಐಮಂಗಲ 4.8 ಮಿ.ಮೀ, ಧರ್ಮಪುರ 17.3 ಮಿ.ಮೀ, ಜವನಗೊಂಡನಹಳ್ಳಿ 3 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.3 ಮಿ.ಮೀ, ಬಿ.ದುರ್ಗ 0.8 ಮಿ.ಮೀ, ರಾಮಗಿರಿ 0.8 ಮಿ.ಮೀ, ತಾಳ್ಯ 1 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 1.6 ಮಿ.ಮೀ, ಮಾಡದಕೆರೆ 1.7 ಮಿ.ಮೀ, ಮತ್ತೋಡು 0.1 ಮಿ.ಮೀ, ಶ್ರೀರಾಂಪುರ 0.3 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 2.3 ಮಿ.ಮೀ ಹಾಗೂ ದೇವಸಮುದ್ರದಲ್ಲಿ 0.2 ಮಿ.ಮೀ ಮಳೆಯಾಗಿದೆ.
93 ಮನೆಗಳು ಭಾಗಶಃ ಹಾನಿ: ಮಂಗಳವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 93 ಮನೆಗಳು ಭಾಗಶಃ ಹಾನಿಯಾಗಿದ್ದು, 4 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ಹಾಗೂ 69 ಹೆಕ್ಟೇರ್ ಕೃಷಿ ಬೆಳೆ ಹಾಗೂ 44 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 18 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 35 ಮನೆಗಳು 40 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 60 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.
ಹೊಳಲ್ಕೆರೆ 14 ಮನೆಗಳು, ಹೊಸದುರ್ಗ 13 ಮನೆಗಳು ಭಾಗಶಃ ಹಾನಿ ಹಾಗೂ 4 ಮನೆಗೆ ನೀರು ನುಗ್ಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 3 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 10 ಮನೆಗಳು ಭಾಗಶಃ ಹಾನಿ ಹಾಗೂ 9 ಹೆಕ್ಟೇರ್ ಕೃಷಿ ಬೆಳೆ ಹಾನಿ ಹಾಗೂ 4 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
About The Author
Discover more from JANADHWANI NEWS
Subscribe to get the latest posts sent to your email.