
ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಕೆ. ತಿಮ್ಮಯ್ಯ ಹಾಗೂ ಮತದಾರರ ಸಾಕ್ಷರತಾ ಕ್ಲಬ್ ಸಹಾಯಕ ನೋಡಲ್ ಅಧಿಕಾರಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕ ಎಚ್.ಆರ್. ಜಬಿವುಲ್ಲಾ ಕಾಲೇಜಿನ 18 ವರ್ಷ ತುಂಬಿದ ವಿದ್ಯಾರ್ಥಿಗಳನ್ನು ಗುರುತಿಸಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರನ್ನು ಸೇರಿಸುವ ಅಭಿಯಾನವನ್ನು ಪ್ರಾರಂಭಿಸಿ ಕಾಲೇಜಿನ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲೆಯನ್ನು ಮಾನ್ಯ ತಹಸಿಲ್ದಾರ್ ರೆಹಮಾನ್ ಪಾಷಾರ್ ರವರಿಗೆ ಸಲ್ಲಿಸಿದರು.
ವಿದ್ಯಾರ್ಥಿಗಳ ಮತದಾರರ ಪಟ್ಟಿಯನ್ನು ಸ್ವೀಕರಿಸಿ ನಂತರ ತಹಸಿಲ್ದಾರ್ ರೆಹಮಾನ್ ಪಾಷಾ ಮಾತನಾಡಿ ಪ್ರಪಂಚದಲ್ಲಿಯೇ ಭಾರತವು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ,ನಮ್ಮ ಸಂವಿಧಾನ 18 ವರ್ಷ ತುಂಬಿದ ಎಲ್ಲಾರಿಗೂ ಮತದಾನ ಮಾಡುವ ಅವಕಾಶವನ್ನು ಮಾಡಿಕೊಟ್ಟಿದೆ ಮತದಾನ ಅತ್ಯಮೂಲ್ಯವಾದದು ಹಾಗಾಗಿ ಯಾರು ಮತದಾನದಿಂದ ವಂಚಿತರಾಗಬಾರದು ಇಂದಿನ ವಿದ್ಯಾರ್ಥಿಗಳೆ ಮುಂದಿನ ಪ್ರಜೆಗಳು ಎಂದು ಹೇಳಿ ಈ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದ ಕಾಲೇಜಿನ ಪ್ರಾಚಾರ್ಯ ಹಾಗೂ ಮತದಾರರ ಸಾಕ್ಷರತಾ ಕ್ಲಬ್ ಸಿಬ್ಬಂದಿಗೂ ಧನ್ಯವಾದಗಳು ಮತ್ತು ಅಭಿನಂದನೆಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ ಕಾರ್ಯವೈಖರಿಯ ಬಗ್ಗೆ ಶ್ಲಾಗಿನೀಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಎಚ್.ಆರ್. ಅಭಿಬುಲ್ಲಾ, ಸಾಹಿತಿ ನಾಗರಾಜ್ ಬೆಳಗಟ್ಟ, ಎನ್ಎಸ್ಎಸ್ ಅಧಿಕಾರಿ ಶಾಂತಕುಮಾರಿ, ಉಪನ್ಯಾಸಕರಾದ ಜಾನಕಮ್ಮ, ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.