
ನಾಯಕನಹಟ್ಟಿ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ರಾಜ್ಯದಲ್ಲೇ ಅತ್ಯಂತ ಉದ್ದವಾದ ಮಾನವ ಸರಪಳಿ ರಚನೆ ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ (State Award) ಪ್ರಥಮ ಸ್ಥಾನ ದೊರೆತಿದೆ.
2024 ಸೆಪ್ಟಂಬರ್ 15 ರಂದು ರಾಜ್ಯದಲ್ಲಿ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಬೀದರ್ ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಈ ಮಾನವ ಸರಪಳಿ World book of records ಸೇರ್ಪಡೆಗೊಂಡಿತ್ತು.
ಚಿತ್ರದುರ್ಗ ಜಿಲ್ಲೆಗೆ ‘ಅತ್ಯಂತ ಉದ್ದದ ಮಾನವ ಸರಪಳಿ’ ರಚಿಸಲಾಗಿತ್ತು. ಈ ಸರಪಳಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ದೊರೆತಿದೆ.
‘ಅತಿ ಹೆಚ್ಚು ಸ್ವಯಂ ಸೇವಾ ಸಂಘಗಳ ಭಾಗವಹಿಸುವಿಕೆ’ ವಿಭಾಗದಲ್ಲಿ ದ್ವಿತಿಯ ಸ್ಥಾನ ಪಡೆದುಕೊಂಡಿದೆ.
ಈ ಸಂಬಂಧ ದಿನಾಂಕ ನ.26 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ವಿತರಿಸಲಿದ್ದಾರೆ.
ಜಿಲ್ಲೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.