November 25, 2026


ವರದಿ:ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ಮಹಿಳೆಯರು ಹಾಗೂ ಹಿಂದುಳಿದ ಹಾಗೂ ಇತರೆ ವರ್ಗಗಳ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳು ಅವುಗಳನ್ನು ಸದುಪಯೋಗಪಡಿಸಿಕೊಂಡು ಸ್ವಂತ ಉದ್ಯೋಗದ ಮೂಲಕ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025- 2026ನೇ ಸಾಲಿನ ಸ್ವಾವಲಂಬಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳಿಗೆ ವಾಹನ ವಿತರಿಸಿ ಮಾತನಾಡಿದರು.
ಸ್ವಾವಲಂಬಿ ಸಾರಥಿ ಯೋಜನೆಯಡಿ ₹3 ಲಕ್ಷ ಸಹಾಯಧನ ಪಡೆದ 25 ಫಲಾನುಭವಿಗಳ ಪೈಕಿ ಸಾಂಕೇತಿಕವಾಗಿ ಐದು ಫಲಾನುಭವಿಗಳಿಗೆ ವಾಹನಗಳ ಕೀ ವಿತರಿಸಲಾಗಿದೆ. ಇದರ ಜತೆಗೆ 2025-26ನೇ ಸಾಲಿನ ಸ್ವಾವಲಂಬಿ ಯೋಜನೆಯಡಿ ಒಟ್ಟು 17 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ನೀಡಲಾಗಿದ್ದು, ಸರ್ಕಾರದ ಸೌಲಭ್ಯಗಳನ್ನು ಉದ್ಯೋಗದ ಅವಕಾಶವನ್ನಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವತಂತ್ರರಾಗಬೇಕು ಎಂದು ಸಲಹೆ ನೀಡಿದರು
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ವೀರೇಶ್, ದೇವೇಂದ್ರಪ್ಪ, ಅಗ್ರೋ ಹೆಚ್.ಶಿವಣ್ಣ, ದೀಪಿಕಾ, ಆಶ್ರಯ ಕಮಿಟಿ ಸದಸ್ಯ ಸೈಯಾದ್‌ಮಹಭಾಷ್, ನಾಯಿಗೆರೆ ಚಂದ್ರಶೇಖರ್, ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading