ಚಳ್ಳಕೆರೆ:ರಾಷ್ಟ್ರೀಯ ರೈತ ದಿನದ ಅಂಗವಾಗಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳೊಂದಿಗೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸ್ವಚ್ಚತಾ ಕಾರ್ಯದಲ್ಲಿ ಸ್ವಯಂ ಪ್ರೇರಿತವಾಗಿ ಕೈ ಜೋಡಿಸಿ ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.



ಈ ವೇಳೆ ಮಾತನಾಡಿದ ಪ್ರಭಾರ ಪ್ರಾಚಾರ್ಯರಾದ ವಸಂತಕುಮಾರ್ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯಂದು ಸ್ವಯಂ ಪ್ರೇರಿತವಾಗಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿರುವುದು ಸಂತಸದ ವಿಷಯವಾಗಿದೆ ಪ್ರತಿ ಮನೆ ಮನಗಳಲ್ಲೂ ಇಂತಹ ಮನೋಭಾವ ಮೂಡಿದರೆ ಪರಿಸರ ಇನ್ನಷ್ಟು ಸ್ವಚ್ಛವಾಗಿ ಕಂಗೊಳಿಸುತ್ತದೆ ವಿದ್ಯಾರ್ಥಿಗಳು ಉತ್ತಮ ಹೆಜ್ಜೆ ಇಟ್ಟಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಎನ್ ಎಸ್ ಎಸ್ ಅಧಿಕಾರಿ ಶಾಂತಕುಮಾರಿ ಮಾತನಾಡಿ ಪರಿಸರ ದಿನಾಚರಣೆಗಳಲ್ಲಿ ಮಾತ್ರ ಸ್ವಚ್ಛತೆ ಎಂಬ ಮನೋಭಾವದಿಂದ ಹೊರಬಂದು ತಮ್ಮ ಮನೆಯ ಹಾಗೂ ಕಾಲೇಜಿನ ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಿದೆ ಇಂತಹ ದಿಟ್ಟ ಮನೋಭಾವವನ್ನು ಎಲ್ಲ ವಿದ್ಯಾರ್ಥಿಗಳು ಮೈಗೂಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣಗೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದರು.ಕಾಲೇಜಿನ ಎಲ್ಲಾ ಉಪನ್ಯಾಸಕರ ಸಮ್ಮುಖದಲ್ಲಿ ಶ್ರಮದಾನ ಮಾಡುವ ಮೂಲಕ ವಿದ್ಯಾರ್ಥಿಗಳು ರೈತರಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದರು.



About The Author
Discover more from JANADHWANI NEWS
Subscribe to get the latest posts sent to your email.