ಚಿತ್ರದುರ್ಗ, ಜ.24:
ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗೆ ನೀಡಲಾಗುವ 2025–26ನೇ ಸಾಲಿನ ರಾಜ್ಯಮಟ್ಟದ ‘ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ’ಗೆ ಚಿತ್ರದುರ್ಗ ಜಿಲ್ಲೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.
ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳ ವಿಭಾಗದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಈ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗ ವಹಿಸಿದ್ದ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಅದೇ ರೀತಿ, ಬಿಎಲ್‌ಒ ವಿಭಾಗದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿ ಎನ್. ಅಂಬಿಕಾ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ಚುನಾವಣಾ ಸಂಬಂಧಿತ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದಕ್ಕಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ 25ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‌ನಲ್ಲಿ ಆಯೋಜಿಸಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಂದರ್ಭದಲ್ಲಿ ನಡೆಯಲಿದೆ.
About The Author
Discover more from JANADHWANI NEWS
Subscribe to get the latest posts sent to your email.