
ಚಿತ್ರದುರ್ಗಫೆ.22:
ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಲೇರಿಯಾ ಹಾಗೂ ಇತರೆ ಕೀಟಜನ್ಯ ರೋಗಗಳ ಬಗ್ಗೆ ಜಿಲ್ಲೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ ಒಂದು ತರಬೇತಿ ಕಾರ್ಯಾಗಾರ ನಡೆಯಿತು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣಪ್ರಸಾದ್ ಉದ್ಘಾಟಿಸಿ ಮಾತನಾಡಿದ ಅವರು, 2025ಕ್ಕೆ ಮಲೇರಿಯಾ ರೋಗವನ್ನು ನಿರ್ಮೂನೆ ಮಾಡಲು ಕ್ಷೇತ್ರಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಲಹೆ ನೀಡಿದರು.
ತರಬೇತಿ ಕಾರ್ಯಗಾರದಲ್ಲಿ ಎನ್‌ವಿಬಿಡಿಸಿಪಿ ಸಹ ನಿರ್ದೇಶಕ ಡಾ.ಮಹಮದ್ ಶರೀದ್, ರಾಜ್ಯ ಕೀಟಶಾಸ್ತ್ರಜ್ಞರಾದ ಭಾವನ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಶಿ, ಜಿಲ್ಲಾ ಸಹಾಯಕ ಶಾಸ್ತ್ರಜ್ಞರಾದ ನಂದಿನಿಕಡಿ, ಶ್ರೀಬಾರ್ಕಿ ಮತ್ತು ಶ್ರೀಕಾಂತ್, ಚಿತ್ರದುರ್ಗ ಡಿ.ವಿ.ಬಿ.ಡಿ.ಸಿ.ಪಿ ಕಛೇರಿಯ ಎಲ್ಲಾ ಅಧಿಕಾರಿಗಳು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾವೇರಿ, ಬೆಳಗಾವಿ, ಉತ್ತರಕನ್ನಡ, ದಕ್ಷಿಣಕನ್ನಡ, ಶಿವಮೊಗ್ಗ, ಜಿಲ್ಲೆಗಳಿಂದ ಆಗಮಿಸಿರುವ ಎಲ್ಲಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.