December 14, 2025
1742824443407.jpg



ಚಿತ್ರದುರ್ಗ  ಮಾರ್ಚ್ 24:
ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಭರವಸೆಯ ಬೆಳಕು- ಪಂಚ ಗ್ಯಾರಂಟಿ ಯೋಜನೆಗಳು” ಕಿರುಹೊತ್ತಿಗೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಬಿಡುಗಡೆ ಮಾಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ “ಭರವಸೆಯ ಬೆಳಕು- ಪಂಚ ಗ್ಯಾರಂಟಿ ಯೋಜನೆಗಳು” ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಬಿಡುಗಡೆ ಮಾಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ರಾಜ್ಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆಗಳು ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ವರ್ಗಕ್ಕೂ ತಲುಪುತ್ತಿವೆ. ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಒಂದಲ್ಲ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರವು ದೀನ ದಲಿತರ ಹಾಗೂ ಬಡವರ ಶ್ರೇಯೋಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿದ್ದು, ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವುದರೊಂದಿಗೆ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಕಿರುಹೊತ್ತಿಗೆಯ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಫಲಾನುಭವಿಗಳು, ಯೋಜನೆಗಳಿಂದ ತಮಗೆ ಆದ ಅನುಕೂಲ ಹಾಗೂ ಬದುಕಿಗೆ ನೆರವಾದ ಕುರಿತಂತೆ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದು, ಫಲಾನುಭವಿಗಳ ಅನಿಸಿಕೆಗಳು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಂದೇಶವನ್ನು “ಭರವಸೆಯ ಬೆಳಕು- ಪಂಚ ಗ್ಯಾರಂಟಿ ಯೋಜನೆಗಳು’ ಕಿರುಹೊತ್ತಿಗೆ ಒಳಗೊಂಡಿದೆ.
ಈ ಸಂದರ್ಭದಲ್ಲಿ ಶಾಸಕರುಗಳಾದ ಬಿ.ಜೆ. ಗೋವಿಂದಪ್ಪ, ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಕೆ.ಸಿ. ವೀರೇಂದ್ರ ಪಪ್ಪಿ, ಡಾ. ಎಂ. ಚಂದ್ರಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಮುಂತಾದವರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading