March 24, 2026
IMG-20260324-WA0232.jpg

ಚಳ್ಳಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ಭಕ್ತಿಭಾವದಿಂದ ಶ್ರೀ ಆಂಜನೇಯಸ್ವಾಮಿ ದೇವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.
ಮಾರ್ಚ್ 26ರಿಂದ 28ರವರೆಗೆ ನಡೆಯಲಿರುವ ಈ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಮಾರ್ಚ್ 26ರಂದು ಬೆಳಿಗ್ಗೆ ಗಂಗಾಪೂಜೆ ಯೊಂದಿಗೆ ಚಾಲನೆ ನೀಡಲಾಗುತ್ತದೆ.
ಮಾರ್ಚ್ 27ರಂದು ಸಂಜೆ ಐದು ಗಂಟೆಗೆ ಭಕ್ತರ ನಡುವೆ ಭಕ್ತಿಭರವಸೆಯ ‘ರಥೋತ್ಸವ’ ನಡೆಯಲಿದ್ದು, ರಾತ್ರಿ ಒಂಬತ್ತು ಗಂಟೆಗೆ ಆರ್ಕೆಸ್ಟ್ರಾ ಕಾರ್ಯಕ್ರಮವು ನಡೆಯಲಿದೆ.
ಮಾರ್ಚ್ 28ರಂದು ಬೆಳಿಗ್ಗೆ ಅನ್ನಸಂತರ್ಪಣೆ, ಸಂಜೆ ಜಾತ್ರಾ ಕಾರ್ಯಕ್ರಮಗಳು ಹಾಗೂ ರಾತ್ರಿ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಈ ಮಹೋತ್ಸವದಲ್ಲಿ ಭಜನೆ, ನೃತ್ಯ, ನಾಟಕ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಗ್ರಾಮಸ್ಥರು ಹಾಗೂ ಭಕ್ತರಿಗೆ ವಿಶೇಷ ಆಕರ್ಷಣೆಯಾಗಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ. ವ್ಯವಸ್ಥಾಪಕರು ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷರು ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಮಾಹಿತಿಗಾಗಿ ಮಹೇಶ್: 9535861421
ರಾಜೇಶ್ ಎಸ್.ಡಿ.: 849690195

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading