January 29, 2026


ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.24:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಇದೇ ಏ.25ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಬುದ್ಧನಗರದ ಬುದ್ಧ ವೃತ್ತದ ನಗರ ಆರೋಗ್ಯ ಕೇಂದ್ರದಲ್ಲಿ ಮಾನವ ಸರಪಳಿ ಮಾಡಿ, ನಂತರ ಜಾಥಾ ಕಾರ್ಯಕ್ರಮ ನಡೆಯಲಿದೆ.
ಬುದ್ಧ ನಗರದಿಂದ ಪ್ರಾರಂಭವಾಗುವ ಜಾಥಾವು ಶುದ್ಧ ಕುಡಿಯುವ ನೀರಿನ ರಸ್ತೆ ಪ್ರಶಾಂತ ನಗರ ಮಾರ್ಗವಾಗಿ ಶಾಸಕರಾದ ಚಂದ್ರಪ್ಪ ಮನೆ ಹತ್ತಿರದ ಮಾರ್ಗವಾಗಿ ಪರಿಸರ ಕಟ್ಟಡದಿಂದ ಆರೋಗ್ಯ ಕೇಂದ್ರ ಬುದ್ಧ ನಗರದವರೆಗೆ ಜಾಥಾ ನಡೆಯಲಿದೆ. ಜಾಥಾದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮತ್ತು ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸುವರು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಏಪ್ರಿಲ್ 25ರಂದು ವಿಶ್ವ ಮಲೇರಿಯಾ ದಿನ ಆಚರಿಸುತ್ತಿದ್ದು, ಈ ವರ್ಷದ ಧ್ಯೇಯವಾಕ್ಯ “ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ. ಮರು ಹೂಡಿಕೆ ಮಾಡಿ. ಮರು ಕಲ್ಪನೆ ಮಾಡಿ. ಮರು ಉತ್ತೇಜನ ನೀಡೋಣ “Theme: malaria ends with us: reinvest reimagine reignite” 2027 ರ ವೇಳೆಗೆ ಕರ್ನಾಟಕ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಿ ಗುರಿಯನ್ನು ಸಾಧಿಸ ಬೇಕಾಗಿರುವುದರಿಂದ ಎಲ್ಲಾ ಹಂತಗಳಲ್ಲಿಯೂ ಮಲೇರಿಯಾ ಚಟುವಟಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading