April 24, 2026
IMG-20260424-WA0234.jpg

ನಾಯಕನಹಟ್ಟಿ: ಹೋಬಳಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಸ್ಟಲಗುಮ್ಮಿ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರೋಹಿತ್ ಕುಮಾರ್ ಇವರು ಎಸ್ ಎಸ್ ಎಲ್ ಸಿ ಯಲ್ಲಿ 605 ಅಂಕಗಳನ್ನು (96.8%)ಪಡೆಯುವ ಮೂಲಕ ಇಡೀ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿ ಈ ಅದ್ಭುತ ಸಾಧನೆಗೆ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ, ಸಿಹಿ ಹಂಚಿ ಅಭಿನಂದಿಸಿದ್ದಾರೆ.
ಕಠಿಣ ಪರಿಶ್ರಮ ಮತ್ತು ನಿರಂತರ ಅಧ್ಯಯನದಿಂದ
ಈ ಸಾಧನೆ ಸಾಧ್ಯವಾಗಿದೆ ಎಂದು ರೋಹಿತ್ ಕುಮಾರ್ ತಮ್ಮ ಯಶಸ್ಸಿನ ಗುಟ್ಟನ್ನು ಹಂಚಿಕೊಂಡಿದ್ದಾರೆ.
ಅವರ ಈ ಸಾಧನೆಗೆ ಪೋಷಕರು ಮತ್ತು ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading