ಹಿರಿಯೂರು:
ಕಾಟಪ್ಪನಹಟ್ಟಿ ಅತ್ಯಂತ ಹಿಂದುಳಿದ ಕುಗ್ರಾಮ, ಇಲ್ಲಿ ಬಹುತೇಕ ಕಾಡುಗೊಲ್ಲ ಸಮುದಾಯದವರೇ ವಾಸಿಸುತ್ತಿದ್ದಾರೆ. ಆದರೆ, ಈ ಗ್ರಾಮಕ್ಕೆ ಯಾವುದೇ ರಸ್ತೆ, ಚರಂಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬುದಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಎ.ಚಿತ್ತಪ್ಪಯಾದವ್ ಆರೋಪಿಸಿದ್ದಾರೆ.
ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರದಂದು ತಾಲ್ಲೂಕು ಯರಬಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಟಪ್ಪನಹಟ್ಟಿ ಗ್ರಾಮದಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಗ್ರಾಮಸ್ಥರು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ತಾಲ್ಲೂಕು ತಹಶೀಲ್ದಾರ್ ರಿಗೆ ಮನವಿಪತ್ರ ಸಲ್ಲಿಸಿ, ಅವರ ಮಾತನಾಡಿದರು.
ಗ್ರಾಮಪಂಚಾತಿಯಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಅನೇಕ ಬಾರಿ ಮನವಿ ನೀಡಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಯಾವುದೇ ಅಧಿಕಾರಿಯೂ ಗ್ರಾಮಕ್ಕೆ ಭೇಟಿ ನೀಡಿಲ್ಲ. ಇದರಿಂದ ಸಾರ್ವಜನಿಕರು ನಿತ್ಯ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂಬುದಾಗಿ ಆಪಾದಿಸಿದರಲ್ಲದೆ,
ಕಾಟಪ್ಪನಹಟ್ಟಿ ಗ್ರಾಮಕ್ಕೆ ರಸ್ತೆ, ಚರಂಡಿ, ಶೌಚಾಲಯ ಹಾಗೂ ಯೋಜನೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವ ಮೂಲಕ ಗ್ರಾಮಸ್ಥರ ಸಂಕಷ್ಟವನ್ನು ಪರಿಹರಿಸಬೇಕು ಇಲ್ಲವಾದಲ್ಲಿ ಗ್ರಾಮಸ್ಥರು ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಎ.ಚಿತ್ತಪ್ಪಯಾದವ್, ರಾಘವೇಂದ್ರ, ಮಹಾಲಕ್ಷ್ಮಿ, ನಾಗವೇಣಿ, ನಾಗಲಕ್ಷ್ಮಿ, ಕುಸುಮ, ಸರೋಜಮ್ಮ, ಕವಿತಾ, ಶಶಿಕಲಾ, ಹಾಲೇಶ್ ಯಾದವ್, ಸಿದ್ಧರಾಜ್, ಗಂಗಾಧರ್, ರಮೇಶ್, ತಮ್ಮಣ್ಣ, ಪುನೀತ್ ಯಾದವ್ ಸೇರಿದಂತೆ ಅನೇಕರು ಉಪಸ್ಥಿರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.