September 15, 2025
n640599115173244936990655866340201194c2c9f24ca594f1877e38cab408c073daf31e326e1e5f9ab659.jpg

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಮುದಾಯ ಆರೋಗ್ಯ ಕೇಂದ್ರದ ವೈದ್ಯನೊಬ್ಬ ಸಾವನಪ್ಪಿದ್ದಾನೆ.
ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ನಡೆದಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.lತಿಮ್ಮೇಗೌಡ (34) ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ಸು ಆಗಮಿಸುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇಂದು ದಾವಣಗೆರೆಯಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ಶ್ವಾಸಕೋಶ ತಜ್ಞ ಸಮಾವೇಶದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಚಲಿಸಿ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ವೈದ್ಯರ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತ ಕುರಿತಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading