December 14, 2025
FB_IMG_1735046293156.jpg


ಚಿತ್ರದುರ್ಗಡಿ.24:
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣ ಸಭಾಂಗಣದಲ್ಲಿ ಸೋಮವಾರ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾದ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ರಕ್ಷಣಾ ನೀತಿಯಲ್ಲಿ ಮಕ್ಕಳಿಗೆ ಒದಗಿಸಬೇಕಾದ ಮೂಲ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಇವುಗಳನ್ನು ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುμÁ್ಠನ ಮಾಡಬೇಕು. ಶಾಲೆಗಳು ಕೇವಲ ಶಿಕ್ಷಣ ಕೊಡುವ ಕೇಂದ್ರಗಳಾಗದೆ, ರಕ್ಷಣೆಯನ್ನೂ ಒದಗಿಸಬೇಕಾದ ತುರ್ತು ಅಗತ್ಯವಿದೆ. ಶಾಲೆಗಳು ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಮಕ್ಕಳ ರಕ್ಷಣಾ ನೀತಿ ಕಟ್ಟುನಿಟ್ಟಾಗಿ ಶಾಲೆಗಳಲ್ಲಿ ಅನುಷ್ಠಾನವಾಗಬೇಕು ಎಂದು ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ಇದೇ ಸಂದಭದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ-2009ರ ಅನ್ವಯ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಆಂದೋಲನಾ ಕುರಿತು ತರಬೇತಿ ನೀಡಲಾಯಿತು.
ಚಿತ್ರದುರ್ಗ ಉಪವಿಭಾಗದ ಡಿವೈಎಸ್‍ಪಿ ಪಿ.ಕೆ.ದಿನಕರ್ ಅವರು ಶಾಲೆಯಲ್ಲಿನ ಮಕ್ಕಳ ಸುರಕ್ಷತೆ ಹಾಗೂ ತೆರೆದ ಮನೆ ಕಾರ್ಯಕ್ರಮದ ಬಗ್ಗೆ ಹಾಗೂ ಶಿಕ್ಷಕ ಸಿ.ಎಲ್.ಏಕನಾಥ್ ಅವರು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಓ.ಪವಿತ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಸೇರಿದಂತೆ, ಶಿಕ್ಷಣ ಇಲಾಖೆ ಅಧಿಕಾರಿಗಳು, ಅಕ್ಷರ ದಾಸೋಹ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading