ವರದಿ.ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ ): ಯೇಸು ಸ್ವಾಮಿಯು ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಬದುಕನ್ನು ಕರುಣಿಸಲಿ, ನಾಡಿನ ಒಳಿತಿಗಾಗಿ ಯೇಸು ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇವೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್ ಹೇಳಿದರು.
ಅವರು ಪಟ್ಟಣದ ಚರ್ಚ್ ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕೇಕ್ ಗಳನ್ನು ವಿತರಿಸಿ ಮಾತನಾಡಿದರು.
ಶಾಸಕ ಡಿ.ರವಿಶಂಕರ್ ಮತ್ತು ಎಂಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕ ದೊಡ್ಡಸ್ವಾಮೇಗೌಡರು ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಚರ್ಚ್ ಗಳಿಗೂ ಭೇಟಿ ನೀಡಿ ಸರ್ವರಿಗೂ ಶುಭವನ್ನು ಕೋರಿ ಕೇಕ್ ಗಳನ್ನು ವಿತರಣೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸೂಚನೆಯಂತೆ ತಾಲೂಕಿನಲ್ಲಿರುವ ಎಲ್ಲಾ ಚರ್ಚ್ ಗಳಿಗೆ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳೊಂದಿಗೆ ತೆರಳಿ ಶುಭವನ್ನು ಕೋರಿ ಕೇಕ್ ವಿತರಣೆ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಚರ್ಚ್ ನ ಫಾಸ್ಟರ್ ಸುಕುಮಾರ್, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಪ್ರಭಾಕರ್, ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಪುರಿಗೋವಿಂದರಾಜು, ಪತ್ರ ಬರಹಗಾರ ವಸಂತ, ಮುಖಂಡರುಗಳಾದ ಅರುಣ್ ರಾಜ್, ಬಲರಾಮೇಗೌಡ, ಸಂತೋಷ, ತಂದ್ರೆಧರ್ಮ, ವೀರಭದ್ರ, ಜನಾರ್ಧನ್, ಮುತ್ತರ್ ಪಾಷ, ವಾಸಿಂ, ತೀರ್ಥಯ್ಯ, ಮಂಜುನಾಥ್, ಶಿವಣ್ಣ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.