February 25, 2026
FB_IMG_1772023850265.jpg

ಚಿತ್ರದುರ್ಗಫೆ.25:
ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಹೊಳಲ್ಕೆರೆ ತಾಲ್ಲೂಕಿನ ನಗರ ಪ್ರದೇಶದಲ್ಲಿ ಕೋಟ್ಪಾ 2003ರ ಕಾಯ್ದೆಯ ಕುರಿತು ಮಂಗಳವಾರ ತಂಬಾಕು ಉತ್ಪನ್ನ ಮಾರಾಟಗಾರರ ಅಂಗಡಿಗಳಿಗೆ ದಾಳಿ ಮಾಡಿ ದಂಡ ವಿಧಿಸಿದೆ.
ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ರೇಖಾ ಅವರ ಮಾರ್ಗದರ್ಶನ ಹಾಗೂ ಆದೇಶದನ್ವಯ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಹೊಳಲ್ಕೆರೆ ತಾಲ್ಲೂಕಿನ ನಗರ ಪ್ರದೇಶಗಳಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡದ ವತಿಯಿಂದ ಆರೋಗ್ಯ ಇಲಾಖೆ ಮತ್ತು ಪುರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ, ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ, ತಂಬಾಕು ಕಾರ್ಯಾಚರಣೆ ಮಾಡಿ ಸಾರ್ವಜನಿಕರಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಕೆ ನೀಡಿ, ಜಾಗೃತಿ ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 20 ಕೇಸುಗಳನ್ನು ದಾಖಲಿಸಿ ರೂ. 2075 ದಂಡ ಮತ್ತು ಸೆಕ್ಷನ್-6ಎ ಅಡಿಯಲ್ಲಿ 3 ಕೇಸುಗಳನ್ನು ದಾಖಲಿಸಿ ರೂ. 275 ದಂಡ ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಹೊಳಲ್ಕೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಕೆ.ರಂಗನಾಥ, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಕಲ್ಪನಾ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading