ವರದಿ: ಶಿವಮೂರ್ತಿ ನಾಯಕನಹಟ್ಟಿ.
ನಾಯಕನಹಟ್ಟಿ : ಹೋಬಳಿಯ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಗೆರೆ ಗ್ರಾಮದ ಅಂಗನವಾಡಿ ಎ-ಕೇಂದ್ರದ ಕಟ್ಟಡ ಕಾಮಗಾರಿಯ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸಾರ್ವಜರು ಗಂಭೀರ ಆರೋಪ ಮಾಡಿದರು.
2020-21ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಳ್ಳಕೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಗೌಡಗೆರೆ,ಮಲ್ಲೂರಹಳ್ಳಿ,ಎನ್.ದೇವರಹಳ್ಳಿ,ಚನ್ನಮ್ಮನಾಗತಿಹಳ್ಳಿ ಹಾಗೂ ತಿಮ್ಮಪ್ಪಯ್ಯನಹಳ್ಳಿ
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ರೂ.5 ಲಕ್ಷಗಳಂತೆ ಒಟ್ಟು ರೂ. 25 ಲಕ್ಷಗಳ ಅನುದಾನವನ್ನು ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಚಿತ್ರದುರ್ಗ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ರವರ ಮುಖಾಂತರ ಅನುಮೋದನೆ ನೀಡಲಾಗಿತ್ತು.
ಆದರೆ ಅನುಮೋದನೆ ದೊರೆತು ಇಂದಿಗೆ 5 ವರ್ಷ ಕಳೆದರೂ ಕೂಡ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಿಲ್ಲ, ಅಡಿಪಾಯ ಹಾಕಿರುವುದು ಬಿಟ್ಟರೇ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದ ಕಾರಣ ಸಾರ್ವಜನಿಕರು ಅನುಮಾನ ವ್ಯಕ್ತ ಪಡಿಸಿದರು.ಪಸ್ತುತ ಅಂಗನವಾಡಿ ಕಟ್ಟಡ ವಿಲ್ಲದ ಕಾರಣ ಸರ್ಕಾರಿ ಶಾಲಾ ಕೊಠಡಿಯಲ್ಲಿ ಅಂಗನವಾಡಿ ನಡೆಯುತ್ತಿದ್ದು ಅದು ಕೂಡ ಶಿಥಿಲಾವಸ್ಥೆಯಲ್ಲಿದೆ.5 ವರ್ಷಗಳ ಕಾಲ
ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತು ಕೊಂಡರೆ ಎಂಬ ಅನುಮಾನ ಮೂಡುತ್ತಿದೆ ಎಂದರು.
ಸಂಬಂಧಪಟ್ಟ ಆಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ
ಜರುಗಿಸಬೇಕು ಎಂದು ಆಗ್ರಹಿಸಿದರು.
ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಲಾಗಿದೆ.
ಹರಿಪ್ರಸಾದ್.
ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಚಳ್ಳಕೆರೆ.
About The Author
Discover more from JANADHWANI NEWS
Subscribe to get the latest posts sent to your email.