June 10, 2026
IMG-20260525-WA0162.jpg

ವರದಿ: ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ತಾಲೂಕಿನ ಸಾಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೀಲಾಪುರ ಗ್ರಾಮದಲ್ಲಿ ಚರಂಡಿಗಳು ಸಂಪೂರ್ಣವಾಗಿ ಕಸ ಹಾಗೂ ಕೊಳಚೆ ನೀರಿನಿಂದ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಮುಖ್ಯ ರಸ್ತೆಗೆ ಹರಿದು ಬರುತ್ತಿರುವುದರಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಚರಂಡಿ ನೀರು ರಸ್ತೆಯಲ್ಲೇ ನಿಂತು ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಮುಖಂಡರು, ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮದ ರಸ್ತೆಯಲ್ಲೇ ಕೊಳಚೆ ನೀರು ಹರಿಯುತ್ತಿರುವುದು ಪೀಲಾಪುರ ಗ್ರಾಮದ ದುಸ್ಥಿತಿಗೆ ಸಾಕ್ಷಿಯಾಗಿದೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಚರಂಡಿಗಳನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಇಲ್ಲವಾದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ವಿನೂತನ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading