ಹಿರಿಯೂರು :
ತಾಲೂಕಿನ ಪುರಾಣ ಪ್ರಸಿದ್ಧವಾದ ಐತಿಹಾಸಿಕ ವದ್ದಿಕೆರೆ ಶ್ರೀಸಿದ್ದೇಶ್ವರಸ್ವಾಮಿಯ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡುವ ಮೂಲಕ ಭಕ್ತಿ ಹಾಗೂ ಶ್ರದ್ಧೆಯಿಂದ ಸ್ವಾಮಿಗೆ ನಮಸ್ಕರಿಸಿ, ಶ್ರೀಸ್ವಾಮಿಯ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸರ್ಕಾರದಿಂದ ಅನುದಾನ ನೀಡುವಂತೆ ಮಾಜಿ ಶಾಸಕರಾದ ಶ್ರೀಮತಿ ಕೆ.ಪೂರ್ಣಿಮಾಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಸುಹಾಸ್ ಸುಧಾಕರ್ ಹಾಗೂ ದೇವಸ್ಥಾನ ಸಮಿತಿ ಸದಸ್ಯರು ಮನವಿ ಮಾಡಿದರು. ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



About The Author
Discover more from JANADHWANI NEWS
Subscribe to get the latest posts sent to your email.