September 14, 2025
1756132115579.jpg


ಚಳ್ಳಕೆರೆಆ.25:
ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ವಿಶ್ವ ಸೊಳ್ಳೆ ದಿನ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಆಡಳಿತ ವೈದ್ಯಾಧಿಕಾರಿ ಹೆಚ್.ಸಿ.ಗುರುಪ್ರಸಾದ್, 1897ರ ಆಗಸ್ಟ್ 20ರಂದು ಬ್ರಿಟಿμï ಸೇನೆಯ ಸರ್ಜನ್ ಸರ್ ರೊನಾಲ್ಡ್ ರೋಲ್ಸ್ ಎನ್ನುವ ಜೀವವಿಜ್ಞಾನಿಯು ಜನರಿಗೆ ಮೃತ್ಯು ಕೂಪವೆನ್ನಿಸುವ ಮಲೇರಿಯಾ ರೋಗವು ಪ್ಯಾರಸೈಟ್ ಮೂಲಕ ಹರಡಲು ಅನಾಫೆಲಿಸ್ ಎನ್ನುವ ಹೆಣ್ಣು ಸೊಳ್ಳೆಯು ಕಾರಣವೆಂದು ಜಗತ್ತಿಗೆ ವಿವರಿಸಿದ ದಿನವಾಗಿದೆ. ಈ ಸೊಳ್ಳೆಯು ಇμÉ್ಟೂಂದು ಭೀಕರ, ಆಘಾತಕಾರಿ ವ್ಯಾಧಿಯನ್ನು ಹರಡುತ್ತದೆ ಎಂಬ ಕಲ್ಪನೆಯು ಜನರಿಗೆ ಅದುವರೆಗೂ ಇರಲಿಲ್ಲ. ಹೀಗೆ ಅರಿವು ಮೂಡಿಸಿದ ಆ ವಿಜ್ಞಾನಿಯ ನೆನಪಿಗಾಗಿ ವಿಶ್ವ ಸೊಳ್ಳೆಗಳ ದಿವಸವೆಂದು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಸೊಳ್ಳೆಗಳು ನಿಂತ ನೀರಿನಲ್ಲಿ ಮಾತ್ರ ಮೊಟ್ಟೆಯನ್ನು ಇಡುತ್ತವೆ. ಮಳೆಗಾಲದಲ್ಲಿ ಹರಿದು ಹೋಗುವ ನೀರಿನಲ್ಲಿ ಇವು ಮೊಟ್ಟೆಯನ್ನು ಇಡುವುದಿಲ್ಲ. ಕೊಳ್ಳಗಳಲ್ಲಿ ತುಂಬಿಕೊಳ್ಳುವ ನೀರಿನಲ್ಲಿ ಮೊಟ್ಟೆಗಳನ್ನು ಇಟ್ಟು ಸಂತತಿ ಹೆಚ್ಚಿಸಿಕೊಳ್ಳುತ್ತವೆ. ಆದುದರಿಂದ ಸೊಳ್ಳೆಗಳ ಸಂತಾನೋತ್ಪತಿ ತಡೆಯಲು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ತೆಂಗಿನ ಚಿಪ್ಪು, ಬಳಸಲ್ಪಟ್ಟ ಟಯರ್ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್ ಬಾಟಲಿಗಳನ್ನು ರಸ್ತೆಯ ಬದಿಯಲ್ಲಿ ಎಸೆಯಬಾರದು. ತಾರಸಿಯಲ್ಲಿ ನೀರಿನ ಕುಂಡದಲ್ಲಿ ನೀರು ನಿಲ್ಲದಂತೆ ಜಾಗೃತಿ ವಹಿಸಬೇಕು. ನೀರಿನ ಟ್ಯಾಂಕ್, ತೊಟ್ಟಿಗಳನ್ನು ಮುಚ್ಚಿಡಬೇಕು. ಪಾತ್ರೆಗಳಲ್ಲಿ ಇರುವ ನೀರನ್ನು ಪ್ರತಿ ದಿವಸವು ಬದಲಾಯಿಸಬೇಕು. ಎಲ್ಲ ಸೊಳ್ಳೆಗಳು ಕಚ್ಚುವುದಿಲ್ಲ. ಕೇವಲ ಹೆಣ್ಣು ಸೊಳ್ಳೆಗಳು ಮಾತ್ರ ಕಚ್ಚುತ್ತವೆ ಎಂದು ಹೇಳಿದರು.
ಸೊಳ್ಳೆಗಳ ಕಡಿತ ತಪ್ಪಿಸಿಕೊಳ್ಳಲು ಸಂಪೂರ್ಣವಾಗಿ ಮೈಮುಚ್ಚುವ ಬಟ್ಟೆಗಳನ್ನು ಧರಿಸಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಕಿಟಕಿ ಬಾಗಿಲುಗಳಿಗೆ ಮೆಶ್ ಅಳವಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿ.ಎನ್.ನವೀನ್ ಕುಮಾರ್, ಪ್ರಾಥಮಿಕ ಸುರಕ್ಷತಾಧಿಕಾರಿಗಳಾದ, ಶಕುಂತಲಮ್ಮ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸ್ನೇಹ , ಶಬೀನ ಬಾನು, ಆರೋಗ್ಯ ಸಿಬ್ಬಂದಿಗಳ ಪೂರ್ಣಸಾಗರ, ಎಲ್ಲಾ ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading