ವರದಿ:ನಾಗತಿಹಳ್ಳಿಮಂಜುನಾಥ್
ಹೊಸದುರ್ಗ: ೨೦೨೮ರ ವಿಧಾನಸಭೆ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಹಾಗೂ ೨೦೨೯ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕು ಎಂಬ ಗುರಿಯೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಭಾರತ್ ಜೋಡೋ ಮೂಲಕ ಯುವಕರನ್ನ ಸಂಘಟಿತರಾಗಿ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಕರೆ ನೀಡಿದರು.
ಪಟ್ಟಣದ ಎಸ್‌ಎಲ್‌ವಿ ಸಭಾಂಗಣದಲ್ಲಿ ನಡೆದ ‘ಭಾರತ್ ಜೋಡೋ ಯುವ ಸಂಘ’ಗಳ ರಚನೆ ಕುರಿತ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
೨೦೨೮ರ ವಿಧಾನಸಭೆ ಹಾಗೂ ೨೦೨೯ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಪಕ್ಷದ ಪ್ರಮುಖ ಗುರಿಯಾಗಿದೆ. ಯುವ ಸಂಘಟನೆಗಳ ಮೂಲಕ ದೇಶ ನಿರ್ಮಾಣದಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ಅವರು ಯುವಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಗ್ರಾಮಮಟ್ಟದಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲು ಮೇಲ್ವಿಚಾರಕರು ಹಾಗೂ ಪ್ರತಿನಿಧಿಗಳನ್ನು ನಿಯೋಜಿಸಲಾಗಿದೆ ಎಂದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೩೫ ವರ್ಷದೊಳಗಿನ ಕನಿಷ್ಠ ೧೦೦ ಯುವಕರನ್ನು ಸಂಘದ ಸದಸ್ಯರನ್ನಾಗಿ ನೋಂದಾಯಿಸಲಾಗುವುದು. ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ೧೫ ಸದಸ್ಯರ ಸಮಿತಿ ರಚಿಸಲಾಗುತ್ತದೆ. ಕಾಂಗ್ರೆಸ್‌ನ ಗ್ರಾಮ ಪಂಚಾಯಿತಿ ಮಟ್ಟದ ಮುಖಂಡರು ಯಾವುದೇ ಉದಾಸೀನ ಮಾಡದೆ ಯುವಕರನ್ನು ಸಂಘಟಿಸಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು.
ಯುವಜನರನ್ನು ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಚಿಂತನೆ, ಫಿಟ್‌ನೆಸ್, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ೧೦ ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ೧೬ರಿಂದ ೩೫ ವರ್ಷದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಬೇಕು ಎಂದು ಹೇಳಿದರು.
ಪ್ರತಿ ನೋಂದಾಯಿತ ಸಂಘಕ್ಕೆ ವಾರ್ಷಿಕ ಹಂತ ಹಂತವಾಗಿ ₹೧೦ ಲಕ್ಷದವರೆಗೆ ಅನುದಾನ ನೀಡುವ ಯೋಜನೆ ಇದೆ. ಈಗಾಗಲೇ ₹೨ ಲಕ್ಷ ಅನುದಾನ ಮಂಜೂರಾಗಿದ್ದು, ಅದನ್ನು ದುರ್ಬಳಕೆ ಮಾಡದೆ ಸಮರ್ಪಕವಾಗಿ ಬಳಸಬೇಕು. ಅನುದಾನದ ಮೂಲಕ ಉತ್ತಮ ಕಾರ್ಯಗಳನ್ನು ಕೈಗೊಂಡು ಪಕ್ಷ ಹಾಗೂ ಸಂಘಕ್ಕೆ ಗೌರವ ತರುವಂತೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
About The Author
Discover more from JANADHWANI NEWS
Subscribe to get the latest posts sent to your email.