December 14, 2025
1758807038547.jpg


ಚಿತ್ರದುರ್ಗ ಸೆ.25:
ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಪರಿಸರ ಸ್ವಚ್ಛತೆ ಬಹು ಮುಖ್ಯ. ಸ್ವಚ್ಛತೆ ಕೊರತೆಯಿಂದ ರೋಗಗಳು ಉಲ್ಬಣವಾಗಬಹುದು, ಸ್ವಚ್ಛತೆಯಲ್ಲಿದೆಯೋ ಅಲ್ಲಿದೆ ಆರೋಗ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ.ಪಿ ರೇಣುಪ್ರಸಾದ್ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ನಗರಸಭೆ ಇವರ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಸ್ವಚ್ಛ ಭಾರತ ಅಭಿಯಾನ 11ನೇ ವಾರ್ಷಿಕೋತ್ಸವ ಆಚರಿಸುವ ಈ ಸಂದರ್ಭದಲ್ಲಿ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸರ್ಕಾರ ಈ ಅಭಿಯಾನವನ್ನು ಸೆಪ್ಟಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಆಚರಿಸಲಾಗುತ್ತದೆ. ಸ್ವಚ್ಛತಾ ಹಿ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ 2025 ಅಭಿಯಾನದಡಿ ಇಂದು ಬೆಳಿಗ್ಗೆ ಎಂಟರಿಂದ ಒಂಬತ್ತು ಗಂಟೆವರೆಗೆ ಕಚೇರಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರೊಂದಿಗೆ ಆವರಣ ಸ್ವಚ್ಛತಾ ಕಾರ್ಯ ಕೈಗೊಂಡು ಅವರು ಮಾತನಾಡಿದರು.
ಸ್ವಚ್ಛತಾ ಕಾರ್ಯದಲ್ಲಿ ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಅಭಿನವ, ತಾಲೂಕ ಆರೋಗ್ಯ ಅಧಿಕಾರಿ ಡಾ. ಬಿ ವಿ ಗಿರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಮತ್ತು ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading