ಬೆಂಗಳೂರು ನಗರ ಜಿಲ್ಲೆ ಸೆ.25 ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 18 ಕೋಟಿ ಹಾಗೂ 72 ಕೋಟಿ (ಮಾರುಕಟ್ಟೆ ಮೌಲ್ಯದ) 12 ಎಕರೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ರವರ ನೇತೃತ್ವದಲ್ಲಿ ತೆರುವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ರವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸರ್ಕಾರಿ ಜಮೀನು ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಾಡಾಗ್ರಹಾರ ಗ್ರಾಮದ ಸರ್ವೆ ನಂ 34 ರ ಹೊಸ ಸರ್ವೆ ನಂ 115 ಮತ್ತು 116 ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 12.00 ಎಕರೆಗಳಾಗಿದ್ದು, ಅಂದಾಜು ಮೌಲ್ಯ ರೂ 18 (ಮಾರ್ಗಸೂಚಿ ಮೌಲ್ಯ) ಹಾಗೂ ರೂ 72 (ಮಾರುಕಟ್ಟೆ ಮೌಲ್ಯ ) ಕೋಟಿಗಳಾಗಿರುತ್ತದೆ.
ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ. ನಾಯಕ್, ಭೂ ದಾಖಲೆಗಳ ಉಪ ನಿರ್ದೇಶಕ ಸುಜಯ್, ಬೆಂಗಳೂರು ಪೂರ್ವ ತಾಲ್ಲೂಕಿನ ತಹಶೀಲ್ದಾರ್ ಪರಶುರಾಮ್ ಹಾಗೂ ಬೆಂಗಳೂರು ಪೂರ್ವ ತಾಲ್ಲೂಕಿನ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.
(ಚಿತ್ರ ಇದೆ)
About The Author
Discover more from JANADHWANI NEWS
Subscribe to get the latest posts sent to your email.