ಚಿತ್ರದುರ್ಗ ನ.25:
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಮಂಗಳವಾರದಂದು ಪ್ರಕಟಿಸಲಾಗಿದ್ದು, ಪಟ್ಟಿ ಕುರಿತು ಆಕ್ಷೇಪಣೆಗಳಿದ್ದಲ್ಲಿ ಡಿ. 10 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ಮತದಾರರ ನೋಂದಣಿ ನಿಯಮಗಳು, 1960 ರ ನಿಯಮಗಳಿಗನುಸಾರವಾಗಿ ಸಿದ್ಧಪಡಿಸಿರುವ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ನ.25 ರಂದು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ತಹಸಿಲ್ದಾರರ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಕಚೇರಿ ವೇಳೆಯಲ್ಲಿ ಪರಿಶೀಲನೆಗೆ ಲಭ್ಯವಿದೆ.
ಮತದಾರರ ಪಟ್ಟಿ ತಯಾರಿಕೆಗಾಗಿ 2025 ರ ನವೆಂಬರ್ 01 ಅರ್ಹತಾ ದಿನಾಂಕವಾಗಿರುತ್ತದೆ. ಈಗಾಗಲೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅರ್ಹತಾ ದಿನಾಂಕದಂತೆ ಮರತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು, ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಅಂತಹವುಗಳನ್ನು ಡಿಸೆಂಬರ್ 10 ರೊಳಗಾಗಿ ಚುನಾವಣೆ ಆಯೋಗವು ನಿಗದಿಪಡಿಸಿದ ನಮೂನೆಯಲ್ಲಿ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳು ಹಾಗೂ ನಿರ್ದಿಷ್ಟಾಧಿಕಾರಿಗಳಲ್ಲಿ ಸಲ್ಲಿಸಬಹುದಾಗಿದೆ. ಇದುವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳದ ಅರ್ಹ ವ್ಯಕ್ತಿಗಳು ಈ ಅವಕಾಶವನ್ನು ಬಳಸಿಕೊಂಡು, ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ.
ಎಲ್ಲ ವಿವರಗಳನ್ನು ಜಿಲ್ಲೆಯ ವೆಬ್‍ಸೈಟ್ https://chitradurga.nic.in/en ನಲ್ಲಿ ಲಭ್ಯವಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.