ನಾಯಕನಹಟ್ಟಿ ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷರ ಆದೇಶದಂತೆ ಹಾಗೂ ವರ್ಕಿಂಗ್ ಕಮಿಟಿ ರಾಜ್ಯ ಕಾರ್ಯಾಧ್ಯಕ್ಷೆ ಎನ್.ಎಸ್. ಸುವರ್ಣಮ್ಮ ಅವರ ಸಹಕಾರದೊಂದಿಗೆ, ರಾಜ್ಯ ಸಂಘಟನಾ ಸಂಚಾಲಕರಾದ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ನೂತನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ದಿನಾಂಕ 24-12-2025 ರಂದು ಚಿತ್ರದುರ್ಗದ ಪ್ರವಾಸ ಮಂದಿರದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ವೆಂಕಟೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ಸಂಘದ ಶಾಖೆಯನ್ನು ಅಧಿಕೃತವಾಗಿ ಪ್ರಾರಂಭಿಸಿ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ವರ್ಕಿಂಗ್ ಕಮಿಟಿ ರಾಜ್ಯ ಕಾರ್ಯಾಧ್ಯಕ್ಷೆ ಎನ್.ಎಸ್. ಸುವರ್ಣಮ್ಮ, ರಾಜ್ಯ ಸಂಘಟನಾ ಸಂಚಾಲಕರಾದ ನಾಗರಾಜ್, ಎಸ್. ಜಯಣ್ಣ, ಎಸ್.ಸಿ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಶ್ರೀ ತಿಪ್ಪೇಸ್ವಾಮಿ, ಎಂ. ಕಣಮೆ ಮಾರಮ್ಮ (ಅಧ್ಯಕ್ಷರು), ಶ್ರೀ ಆನಂದ (ಲೇಖಕರು) ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕಾರ್ಮಿಕರ ಹಕ್ಕು ರಕ್ಷಣೆ, ಸಂಘಟನೆಯ ಬಲವರ್ಧನೆ ಹಾಗೂ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರಲು ನಿರ್ಣಯಿಸಲಾಯಿತು.
About The Author
Discover more from JANADHWANI NEWS
Subscribe to get the latest posts sent to your email.