ನಾಯಕನಹಟ್ಟಿ-: ಪ್ರತಿಯೊಬ್ಬರೂ ಶಿಕ್ಷಣವನ್ನ ಪಡೆಯುವ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಆಗಬೇಕು ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ಆರ್ .ಪ್ರಕಾಶ್ ತಿಳಿಸಿದರು.
ಸೋಮವಾರ ಹೋಬಳಿಯ ಮಲ್ಲೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೇಖಲಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು. ಭಾರತೀಯ ಪ್ರಜೆಗಳಾದ ನಾವು ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದ ಅಡಿಯಲ್ಲಿ ಸಮಾನತೆಯಿಂದ ಬಾಳಬೇಕು ಮಹಾತ್ಮ ಗಾಂಧಿ ಜವಾಹರ್ ನೆಹರು ಡಾಕ್ಟರ್ ಬಿಆರ್ ಅಂಬೇಡ್ಕರ್ ಅನೇಕ ಮಂದಿ ತಮ್ಮ ಪ್ರಾಣವನ್ನ ಪಣಕ್ಕಿಟ್ಟು ನಮಗೆ ಸ್ವಾತಂತ್ರವನ್ನು ತಂದು ಜನಸಾಮಾನ್ಯರ ಏಳಿಗೆಗೆ ಕಾನೂನುಗಳ ತಂದು ಸುದಿನ ಈ ಗಣರಾಜ್ಯೋತ್ಸವವಾಗಿದೆ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಬಿ. ವೀರೇಶ್. ಶಾಲೆಯ ಮುಖ್ಯ ಶಿಕ್ಷಕ ಎಂ.ಬಿ ತಿಪ್ಪೇಶ್, ಸಹ ಶಿಕ್ಷಕಿ ಎಂ.ಎಸ್. ಉಮಾದೇವಿ, ಸ್ವಾತಿ ಎ., ಮಾಜಿ ಎಸ್‌ಡಿಎಂಸಿ ಅಧ್ಯಕ್ಷ ಮಹೇಂದ್ರ ಸೇರಿದಂತೆ ಅಂಗನವಾಡಿ ಶಿಕ್ಷಕರು ಶಾಲಾ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.