February 26, 2026
FB_IMG_1772086055391.jpg

ಚಿತ್ರದುರ್ಗ: ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ (ಭಾ.ಆ.ಸೇ.) ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಸಭೆಯಲ್ಲಿ ನರೇಗಾ .ಸ್ವಚ್ಚಭಾರತ್. ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಲಾಯಿತು.
ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಯೋಜನಾ ಅಧಿಕಾರಿಗಳು, ಸಹಾಯಕ ಅಭಿಯಂತರರು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ತಾಲೂಕಿನ ಪ್ರಗತಿ ವರದಿಯನ್ನು ಮಂಡಿಸಿದರು.
ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ, ನಿರ್ದೇಶಕಿ ಕೆ. ಜಯಲಕ್ಷ್ಮಿ, ಮುಖ್ಯ ಯೋಜನಾ ಅಧಿಕಾರಿ ಸಿ.ಎಸ್. ಗಾಯತ್ರಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಯೋಜನೆಗಳ ಅನುಷ್ಠಾನದಲ್ಲಿ ವೇಗ ತರಬೇಕು, ಗುರಿಗಳನ್ನು ನಿಗದಿತ ಅವಧಿಯಲ್ಲಿ ಸಾಧಿಸಬೇಕು ಹಾಗೂ ಜನರಿಗೆ ಪ್ರಯೋಜನ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದರು. ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿತ್ವ ಹೆಚ್ಚಿಸಲು ಇಲಾಖೆಗಳ ಮಧ್ಯೆ ಸಮನ್ವಯ ಅಗತ್ಯವಿದೆ ಎಂದು ಅವರು ತಿಳಿಸಿದರು.
ಸಭೆ ಅಂತ್ಯದಲ್ಲಿ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಯಿತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading