March 17, 2026
IMG-20250326-WA0145.jpg

     

ಚಳ್ಳಕೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಅನುದಾನವನ್ನು ಒದಗಿಸಿದ್ದು ಈ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಅಡಿಪಾಯ ಹಾಕಿದಂತಾಗಿದೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು. 

ತಾಲೂಕಿನ ಕೋನಿಗರಹಳ್ಳಿ ಓಬಳಾಪುರ ತೊರೆ ಬೀರನಹಳ್ಳಿ ಗೋಸಿಕೆರೆ ಗ್ರಾಮಗಳಲ್ಲಿ 2024 25 ನೇ ಸಾಲಿನ ಜಿಲ್ಲಾ ಖನಿಜ ನಿಧಿ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕೊಠಡಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಪೋಷಕರು ತಮ್ಮ ಮಕ್ಕಳು ಓದುವ ಸಂದರ್ಭದಲ್ಲಿ ಕೂಲಿ ಕೆಲಸಗಳಿಗೆ ಕಳುಹಿಸದೆ ಶಾಲೆಗೆ ಕಳುಹಿಸಿ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಉತ್ತಮ ಪ್ರಜೆಯನ್ನಾಗಿ ನೀಡಬೇಕು ಸರ್ಕಾರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಪಠ್ಯಪುಸ್ತಕ ಸಮವಸ್ತ್ರ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದ್ದು ಶಾಲಾ ಕಟ್ಟಡಗಳ ನಿರ್ಮಾಣಕ್ಕಾಗಿ ಅನುದಾನವನ್ನು ಸಹ ನೀಡುತ್ತಿದೆ ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡಲ್ಲಿ ತಮ್ಮ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಪೋಷಕರು ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಓಬಳೇಶ್, ಉಪಾಧ್ಯಕ್ಷರು, ಸದಸ್ಯರುಗಳು, ಹಿರಿಯ ಮುಖಂಡರಾದ ಪ್ರಭುದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರುಗಳಾದ ದಾಸೇಗೌಡ, ನವೀನ್, ರಾಜಣ್ಣ, ಶ್ರೀನಿವಾಸ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading