ಚಳ್ಳಕೆರೆ: ಮಲೇರಿಯಾ ರೋಗ ಪರಾವಲಂಬಿ
ಸೋಂಕು ಹೆಣ್ಣು (ಅನಾಫಿಲಿಸ್) ಸೊಳ್ಳೆಯಿಂದ ಹರಡುತ್ತದೆ, ಮಲೇರಿಯಾ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿರತ್ತದೆ, ಮಲೇರಿಯಾ ರೋಗ ಹರಡದಂತೆ ಪ್ರತಿಯೊಬ್ಬರೂ ಮುಂಜಾಗೃತೆ ವಹಿಸಲು ಸಮುದಾಯದ ಸಹಕಾರ ಅತ್ಯಗತ್ಯ ಎಂದು ಮುಸ್ಟಲಗುಮ್ಮಿ ಆರೋಗ್ಯ ನಿರೀಕ್ಷಣಾ ಅಧಿಕಾರಿ ಡಾ.ಅಶೋಕ್ ಹೇಳಿದರು.
ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಮುಸ್ಟಲಗುಮ್ಮಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಿತ್ರದುರ್ಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಚಳ್ಳಕೆರೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಲೇರಿಯಾ ದಿನದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸೊಳ್ಳೆ ಕಚ್ಚುವುದರಿಂದ ಜ್ವರ ಮೊದಲಾದ ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಸರಕಾರಿ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರು ಯಾವುದೇ ಜ್ವರ ಬಂದ ತಕ್ಷಣ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ, ಸಂಪೂರ್ಣ ಚಿಕಿತ್ಸೆ ಪಡೆದುಕೊಂಡು ಮಲೇರಿಯಾದಿಂದ ಮುಕ್ತರಾಗಿ, ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ, ಸೋಳ್ಳೆ ಪರದೆ ಬಳಸಿ ಮಲೇರಿಯಾ ಓಡಿಸಿ, ಸ್ವಯಂ ರಕ್ಷಣಾಧಾನ ಅನುಸರಿಸಿ ಮಲೇರಿಯಾದಿಂದ ಮುಕ್ತಿ ಹೊಂದಬೇಕು.ಹಾಗೂ ಮಲೇರಿಯಾ ಮುಕ್ತ ಮಾಡಬೇಕಾದರೆ ಆರೋಗ್ಯ ಇಲಾಖೆಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿಗಳಾದ ನಯನ ಗೀತಾ. ಚೇತನ,ಗೌರಮ್ಮ,ಜ್ಯೋತಿ,ರಾಧಾ,ಲ್ಯಾಬ್ ಟೆಕ್ನಿಷಿಯನ್ ಪಾಂಡುರಂಗ ಹಾಗೂ ಸಾರ್ವಜನಿಕರು ಹಾಜರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.