
ಬಳ್ಳಾರಿ,ಜು.26
ಸಿರುಗುಪ್ಪ ತಾಲ್ಲೂಕು ವ್ಯಾಪ್ತಿಯಲ್ಲಿ ಅರಳಿಗನೂರು ಕಡೆಯಿಂದ ಸಿರುಗುಪ್ಪ ಪಟ್ಟಣದ ಕಡೆಗೆ ಶನಿವಾರ ಬೆಳಗಿನ ಜಾವ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡಿತ್ತಿದ್ದ ಮೂರು ವಾಹನಗಳನ್ನು ಜಪ್ತಿ ಮಾಡಿ, 385 ಅಕ್ಕಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿರುಗುಪ್ಪ ತಾಲ್ಲೂಕಿನ ಆಹಾರ ನಿರೀಕ್ಷಕ ಎಂ.ವಿಜಯ್ ಕುಮಾರ್ ತಿಳಿಸಿದ್ದಾರೆ.


ಅಕ್ಕಿಯು ಸರ್ಕಾರದ ವಿವಿಧ ಯೋಜನೆಗಳಡಿ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಣೆ ಮಾಡುವ ಪಡಿತರ ಅಕ್ಕಿಯಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ವಿವಿಧ ಕಾನೂನುಗಳಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿರುಗುಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.