September 15, 2025
FB_IMG_1732627812469.jpg


ಚಿತ್ರದುರ್ಗ ನ.26:
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಸೃಜನಾತ್ಮಕತೆ ಹಾಗೂ ಜ್ಞಾನಾಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಬಾಲಭವನ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಹೇಳಿದರು.
ನಗರದ ಜಿಲ್ಲಾ ಬಾಲಭವನದಲ್ಲಿ ಮಂಗಳವಾರ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಭಾಗವಹಿಸುವ ಸಲುವಾಗಿ ಜಿಲ್ಲಾಮಟ್ಟದ ಆಯ್ಕೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪೆÇೀಷಕರು ಮತ್ತು ಶಿಕ್ಷಕರಿಗೂ ವಿಶೇಷ ಸ್ಪರ್ಧೆಗಳನ್ನು ಸಹ ಹಮ್ಮಿಕೊಳ್ಳಲಾಗುತ್ತದೆ. ಶಾಸ್ತ್ರೀಯ ನೃತ್ಯಗಳಿಗೆ ಮಕ್ಕಳ ತಯಾರಿ ಮಾಡಿಕೊಳ್ಳುವುದು ಬಹಳ ಕಷ್ಟಕರ. ಆದ್ದರಿಂದ ತೀರ್ಪುಗಾರರು ಅರ್ಹ ಸ್ಪರ್ಧಾಳುಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಅರ್ ಬಣಕಾರ್ ಮಾತನಾಡಿ, ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಹಾಗೂ ರಾಜ್ಯಮಟ್ಟದ ಕಲಾ ಸ್ಪರ್ಧೆಗೆ ಭಾಗವಹಿಸುವ ಮಕ್ಕಳನ್ನು ಆಯ್ಕೆ ಮಾಡುವ ಸಲುವಾಗಿ 9 ರಿಂದ 16 ವರ್ಷದ ಮಕ್ಕಳಿಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದು,್ದ ಒಟ್ಟು 90 ಸ್ಪರ್ಧಿಗಳು ಭಾಗವಹಿಸಿದ್ದು, ಒಂದು ಸ್ಪರ್ಧೆಯಿಂದ ಇಬ್ಬರು ಮಕ್ಕಳಂತೆ ಒಟ್ಟು ಎಂಟು ಮಕ್ಕಳನ್ನು ಆಯ್ಕೆ ಮಾಡಿ ರಾಜ್ಯಮಟ್ಟದಲ್ಲಿ ನಡೆಯುವ ಕಲಾಶ್ರೀ ಕಾರ್ಯಕ್ರಮಕ್ಕೆ ಸಿಬ್ಬಂದಿಯೊಂದಿಗೆ ಕಳಿಸಲಾಗುವುದು ಎಂದರು.
ಕಾರ್ಯಕ್ರಮದ ಉದ್ಘಾಟನೆ ನಂತರ ಸಂವಿಧಾನದ ಪೀಠಿಕೆಯನ್ನು ವಾಚಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ವೆಂಕಟೇಶ್, ಜಿಲ್ಲಾ ನಿರೂಪಣಾಧಿಕಾರಿ ವಿಜಯಕುಮಾರ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಎನ್.ಸುಧಾ, ವೀಣಾ, ಬಾಲ ಭವನ ವ್ಯವಸ್ಥಾಪಕ ಸುರೇಶ್, ಜಿಲ್ಲಾ ಬಾಲವನ ಕಾರ್ಯಕ್ರಮ ಸಂಯೋಜಕರಾದ ಡಿ ಶ್ರೀಕುಮಾರ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading