
ಚಿತ್ರದುರ್ಗ ನ.26
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿಬಿ) ನಾಮ ನಿರ್ದೇಶಿತ ಸದಸ್ಯರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಚಳ್ಳಕೆರೆಯ ಜಿಲ್ಲಾ ಉಸ್ತುವಾರಿ ಸಚಿವ ಅಪ್ತ ಬಳಗದಲ್ಲಿ ಸಿ.ವೀರಭದ್ರ ಬಾಬು ಅವರನ್ನು ಸರ್ಕಾರ ನಾಮ ನಿರ್ದೇಶನ ಮಾಡಲಾಗಿತ್ತು.ಈಗ ಅವರ ನೇಮಕಾತಿಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ತಡೆಹಿಡಿದು, ಅವರ ಜಾಗಕ್ಕೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಜಿಲ್ಲೆಯ ಹಲವು ಕೃಷಿ ಪತ್ತಿನ ಸಹಕಾರಿ ಸಂಘಗಳು ಚುನಾವಣೆಗೆ ಸ್ಪರ್ಧಿಸಲು ಹಾಗೂ ಮತದಾನದ ಅರ್ಹತೆ ಕಳೆದುಕೊಂಡಿದ್ದವು.ಇದರಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಪ್ರತಿನಿಧಿಸುವ ಕಡಬನಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘ ಕೂಡಾ ಅನರ್ಹವಾಗಿತ್ತು.
ಇದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಸಚಿವ ಡಿ.ಸುಧಾಕರ್ ಹಾಗೂ ಶಾಸಕ ಟಿ.ರಘುಮೂರ್ತಿ ನಡುವಿನ ರಾಜಕೀಯಕ್ಕೆ ಸಹ ಕಾರಣವಾಗಿತ್ತು.
ಈಗ ಹೊಸ ಬೆಳವಣಿಗೆಯಲ್ಲಿ ಸರ್ಕಾರದಿಂದ ಶಾಸಕ ಟಿ.ರಘುಮೂರ್ತಿ ಅವರನ್ನು ಡಿಸಿಸಿ ಬ್ಯಾಂಕ್ ನಾಮನಿರ್ದೇಶಿತ ಸದಸ್ಯರಾಗಿ ನೇಮಿಸಿ ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.