ಹಿರಿಯೂರು :
ರೈತ ಈ ದೇಶದ ಬೆನ್ನೆಲುಬು, ರೈತರಮಿತ್ರನಾಗಿ ತಾಲ್ಲೂಕಿನ ಬಬ್ಬೂರು ಫಾರಂನ ಕೃಷಿ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು, ರೈತರ ಶ್ರೇಯೋಭಿವೃದ್ಧಿಗಾಗಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂಬುದಾಗಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಎಂ.ಕಾರಜೋಳ ಹೇಳಿದರು.
ತಾಲ್ಲೂಕಿನ ಬಬ್ಬೂರುಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಜರುಗಿದ ಕೃಷಿ ಮೇಳ 2025 ರ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಎಂ.ಕಾರಜೋಳ, ಗೌರವಾನ್ವಿತ ಕುಲಪತಿಗಳಾದ ಡಾ. ಆರ್.ಸಿ.ಜಗದೀಶ್, ಮಾಜಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಎನ್. ಆರ್.ಲಕ್ಷ್ಮಿಕಾಂತ್ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಸೇರಿದಂತೆ ಅನೇಕ ರೈತಮುಖಂಡರುಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.