ವರದಿ: ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 1956ರ ನ.1ರಂದು ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯ ರಚನೆಯಾದ ಐತಿಹಾಸಿಕ ದಿನವನ್ನು ಸ್ಮರಿಸಬೇಕು. ನಂತರ ಕರ್ನಾಟಕ ಎಂದು ನಾಮಕರಣ ಮಾಡುವಲ್ಲಿ ಡಿ. ದೇವರಾಜ ಅರಸು, ಎಸ್. ನಿಜಲಿಂಗಪ್ಪ ಸೇರಿದಂತೆ ಅನೇಕ ಮಹನೀಯರ ಕೊಡುಗೆ ಸ್ಮರಣೀಯ ಎಂದರು.
ಮಳೆ ನೀರು ವ್ಯರ್ಥವಾಗಿ ಹರಿದುಹೋಗದಂತೆ ತಡೆದು ಕೆರೆಕಟ್ಟೆಗಳಲ್ಲಿ ಸಂಗ್ರಹಿಸುವ ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ ನೀಡಬೇಕು. ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಜಲಮೂಲಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸುಮಾರು 346 ಹಳ್ಳಿಗಳಿಗೆ ಪೈಪ್‌ಲೈನ್ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲು ₹800 ಕೋಟಿ ವೆಚ್ಚದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ಫೆಬ್ರವರಿ–ಮಾರ್ಚ್ ವೇಳೆಗೆ ನೀರು ಪೂರೈಕೆಯಾಗುವ ನಿರೀಕ್ಷೆಯಿದೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳ ಮಹತ್ವವನ್ನು ವಿವರಿಸಿದರು.
ಸಾಹಿತಿ ಮಾಗೋದಿ ಮಂಜಪ್ಪ ವಿಶೇಷ ಉಪನ್ಯಾಸ ನೀಡಿದರು. ತಾಲೂಕು ಕಸಾಪ ಅಧ್ಯಕ್ಷ ಎಂ.ಆರ್. ಶಾಂತಪ್ಪ ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪರಿಷತ್ತಿನ ಉಪಾಧ್ಯಕ್ಷ ನಾಗತಿಹಳ್ಳಿ ಮಂಜುನಾಥ್, ಕೆ.ಬಿ ಚಂದ್ರಯ್ಯ, ಕಾರ್ಯಧರ್ಶಿ ಚಂದ್ರು ಕಲಾವಿದ, ಸಹ ಕಾರ್ಯಧರ್ಶಿ ಎಂ.ಎಸ್ ರಮೇಶ್ ಮತ್ತೋಡು, ಕಾರ್ಯಾಧ್ಯಕ್ಷ ಕೆ. ರಾಮಚಂದ್ರ, ತಾಲೂಕು ನೌಕರರ ಸಂಘದ ಅಧ್ಯಕ್ಷ ಸಿದ್ದರಾಮಪ್ಪ ಮಾಜಿ ಅಧ್ಯಕ್ಷ ಗಂಗಾಧರಪ್ಪ, ಸಿಪಿಐ ಕೆ.ಟಿ. ರಮೇಶ್ ಮುಖಂಡರುಗಳಾದ ಬಿ.ಜಿ. ಅರುಣ್ ಕುಮಾರ್, ಆಗ್ರೋ ಶಿವಣ್ಣ, ಅಲ್ತಾಫ್ ಪಾಷ, ದೀಪಿಕಾ, ಮಾಜಿ ಅಧ್ಯಕ್ಷರುಗಳಾದ ಕೆ.ಎಸ್.ಕಲ್ಮಠ್,ಎಂ.ಬಿ ತಿಪ್ಪೇಸ್ವಾಮಿ, ಬಿ.ಪಿ. ಓಂಕಾರಪ್ಪ, ಬಾ.ಮೈಲಾರಪ್ಪ, ಧನಂಜಯ ಮೆಂಗಸAದ್ರ, ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.
