ನಾಯಕನಹಟ್ಟಿ: ಡಿ. 26 ಹೋಬಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಅತಿ ಹೆಚ್ಚು ಇರುವುದರಿಂದ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು, ಶಿಕ್ಷಣದ ಕೊರತೆ ಕಾಡುತ್ತಿದೆ. ಆದ್ದರಿಂದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಕಾಲೇಜನ್ನು ಒದಗಿಸುವಂತೆ ರೇಖಲಗೆರೆ ತಿಪ್ಪೇಸ್ವಾಮಿ ಆಗ್ರಹಿಸಿದರು.
ಪಟ್ಟಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು ನಮ್ಮ ನಾಯಕನಹಟ್ಟಿ ಹೋಬಳಿಯಲ್ಲಿ 8 ಗ್ರಾಮ ಪಂಚಾಯಿತಿ, 1 ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತಿದ್ದು. ಪಟ್ಟಣದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಿಟ್ಟರೆ, ಬೇರೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಕಾಲೇಜು ಇರುವುದಿಲ್ಲ. ಹೋಬಳಿಯ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಚಳ್ಳಕೆರೆ, ಚಿತ್ರದುರ್ಗ, ದಾವಣಗೆರೆ, ಜಗಳೂರು ಪಟ್ಟಣಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡೋ ಪರಿಸ್ಥಿತಿ ನಿರ್ಮಾಣವಾಗಿದೆ.
ಹೋಬಳಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಎಸ್ಸಿ,ಎಸ್ಟಿ ವಿದ್ಯಾರ್ಥಿಗಳು ಅತಿ ಹೆಚ್ಚು ಇರುವುದರಿಂದ ನಾಯಕನಹಟ್ಟಿ ಪುಣ್ಯಕ್ಷೇತ್ರದಲ್ಲಿ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಪ್ರೌಢಶಾಲೆ ಬೇಕಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಸದೃಢರಾಗಲು ಈ ಭಾಗದ ಜನರಿಗೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲು ಸರ್ಕಾರ ಪಟ್ಟಣಕ್ಕೆ ಸರ್ಕಾರಿ ಕಾಲೇಜ್ ಮತ್ತು ಸರ್ಕಾರಿ ಪ್ರೌಢಶಾಲೆ ಸ್ಥಾಪನೆ ಮಾಡಿದರೆ ಇಂತಹ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಸದೃಢರಾಗಲು ಅನುಕೂಲವಾಗುತ್ತದೆ.
ಸಂಬಂಧಪಟ್ಟ ಅಧಿಕಾರಿಗಳು ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಸರ್ಕಾರಿ ಕಾಲೇಜ್ ನಿರ್ಮಿಸಿ ಕೊಡುವರೇ ಕಾದು ನೋಡಬೇಕಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.