January 30, 2026


ಚಿತ್ರದುರ್ಗ ಜ.27:
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜ.29ರಂದು ಬೆಳಿಗ್ಗೆ 10.30ಕ್ಕೆ ಹೊಸದುರ್ಗ ಪಟ್ಟಣದ ಎಪಿಎಂಸಿ ಮಾರುಕಟ್ಟೆ ರೈತ ಭವನ ಸಭಾಂಗಣದಲ್ಲಿ “ಹೊಸದುರ್ಗ ತಾಲ್ಲೂಕಿನಲ್ಲಿ ಬರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ರಾಮರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹೆಚ್.ವಿ.ಪ್ರಶಾಂತ್, ನಿರ್ದೇಶಕರಾದ ಜಿಂಕಲು ಬಸವರಾಜ್, ಜಿ.ಈ.ಅಜ್ಜಪ್ಪ, ಮಾತೃಶ್ರೀ ಎನ್.ಮಂಜುನಾಥ್, ಹೆಚ್.ಎನ್.ತಿಪ್ಪೇಸ್ವಾಮಿ, ಪ್ರಭಾವತಿ, ಡಿ.ಎಂ.ಮಹೇಶ್ವರಪ್ಪ, ಎ.ಚನ್ನಬಸಪ್ಪ, ಜಿ.ಎಸ್.ಹರೀಶ್, ಕೆ.ಜಗಣ್ಣ, ಶಿವಮೊಗ್ಗ ಹಾಲು ಒಕ್ಕೂಟ ನಿರ್ದೇಶಕರಾದ ಜಿ.ಬಿ.ಶೇಖರಪ್ಪ, ಬಿ.ಸಿ.ಸಂಜೀವಮೂರ್ತಿ, ಜಿ.ಪಿ.ರೇವಣಸಿದ್ದಪ್ಪ, ಬಿ.ಆರ್.ರವಿಕುಮಾರ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್, ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಶಿವಮೊಗ್ಗ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ರಂಗಸ್ವಾಮಿ ಭಾಗವಹಿಸುವರು.

ತರಬೇತಿ ಕಾರ್ಯಕ್ರಮದಲ್ಲಿ “ಲೆಕ್ಕಪತ್ರಗಳ ಆಡಳಿತಾತ್ಮಕ ನಿರ್ವಹಣೆ ಮತ್ತು ಲೆಕ್ಕಪರಿಶೋಧನೆಗೆ ಸಿದ್ಧತೆ” ಕುರಿತು ಶಿರಸಿಯ ಸನ್ನದು ಲೆಕ್ಕಪರಿಶೋಧಕ ಮಣಿಕಂಠ ನ್.ಟೆಕ್ಕೂರ್ ಉಪನ್ಯಾಸ ನೀಡುವರು. ಶುದ್ಧ ಹಾಲು ಉತ್ಪಾದನೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳುವ ಬಗ್ಗೆ ಶಿವಮೊಗ್ಗ ಹಾಲು ಒಕ್ಕೂಟಟ ವಿಸ್ತರಣಾಧಿಕಾರಿ ಕೆ.ಕೃಷ್ಣಪ್ಪ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading