February 27, 2026
IMG-20260227-WA0127.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ ): ಪೋಷಕರುಗಳು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕೆಂದು ಕೆ.ಆರ್.ನಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಂಕರೇಗೌಡ ಹೇಳಿದರು.

ಅವರು ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಖಾಸಗಿ ಶಾಲೆಗಳಲ್ಲಿ ಓದಿದರೆ ಮಾತ್ರ ಮಕ್ಕಳು ದೊಡ್ಡವರಾಗುತ್ತಾರೆಂಬ ಭ್ರಮೆಯನ್ನು ಬಿಡಬೇಕು. ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಚೆನ್ನಾಗಿ ಕಲಿತು ಅತ್ಯುನ್ನತ ಸ್ಥಾನಗಳನ್ನು ಪಡೆಯಬೇಕು ಆ ಮೂಲಕ ನಾಡಿಗೆ ಕೊಡುಗೆಯನ್ನು ನೀಡಬೇಕು ಎಂದರು.

ಗ್ರಾಮಸ್ಥರುಗಳು, ಯುವಕರು, ಮುಖಂಡರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯವರು ಶಾಲೆಯ ಅಭಿವೃದ್ಧಿಗೆ ಹಾಗೂ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದರು.

ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯು ಅನಾವರಣಗೊಳ್ಳಲು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ಅವುಗಳ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುವಂತಹ ಕೆಲಸವನ್ನು ಮಾಡಬೇಕು ಜೊತೆಗೆ ಒಳ್ಳೆಯ ಸಂಸ್ಕಾರವನ್ನು ಕಲಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಕೆಲಸ ಮಾಡಬೇಕು ಎಂದರು.

ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ, ಅಧಿಕಾರಿಗಳು, ಶಿಕ್ಷಕರುಗಳು ಹಾಗೂ ಗಣ್ಯರುಗಳನ್ನು ಅಭಿನಂದಿಸಲಾಯಿತು.

ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಲ್.ವಿ.ಗೋಪಾಲ್, ಮಾಜಿ ಉಪಾಧ್ಯಕ್ಷ ಮಹದೇವ್, ತಾಲೂಕು ಉಪಾಧ್ಯಾಯರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಾಂತರಾಜು, ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಪಲ್ಲವಿ, ಹಾಲಿನ ಡೇರಿ ಅಧ್ಯಕ್ಷ ಸಂಜಯ್ ಕುಮಾರ್, ಮಾಜಿ ಅಧ್ಯಕ್ಷ ಮೊಗಣ್ಣೆಗೌಡ, ಸಿಇಓ ಮಂಜುನಾಥ್, ಮುಖಂಡರುಗಳಾದ ರಾಮಕೃಷ್ಣ, ಲೋಕೇಶ್, ಕೃಷ್ಣೇಗೌಡ, ಸ್ವಾಮಿ, ರಾಮಯ್ಯ, ಶಿವಕುಮಾರ್, ಸದಾಶಿವಪ್ಪ, ಪ್ರದೀಪ್, ಮಂಜಯ್ಯ, ಮುಖ್ಯ ಶಿಕ್ಷಕ ಮುರಳಿಧರ, ಶಿಕ್ಷಕರಾದ ಜಯಣ್ಣ, ನಿರಂಜನ್, ಅತಿಥಿ ಶಿಕ್ಷಕಿ ವಿದ್ಯಾ, ಎಸ್ ಡಿ ಎಂ ಸಿ ಸಮಿತಿಯವರು, ಲಕ್ಕಿಕುಪ್ಪೆ, ಗುಮ್ಮನಹಳ್ಳಿ,,
ಲಕ್ಕಿಕುಪ್ಪೆಕೊಪ್ಪಲು ಗ್ರಾಮಸ್ಥರು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading